ಕರ್ನಾಟಕ

karnataka

ETV Bharat / state

ಸಿಇಎನ್ ಪೊಲೀಸ್ ಠಾಣೆಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಗರದಲ್ಲಿರುವ 8 ಸಿಇಎನ್ ಪೊಲೀಸ್ ಠಾಣೆಗಳಿಗೆ ಸೂಕ್ತ ಮೂಲ ಸೌಕರ್ಯಗಳನ್ನೇ ಒದಗಿಸಿಕೊಟ್ಟಿಲ್ಲ ಎಂದು ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High Court
ಹೈಕೋರ್ಟ್

By

Published : Mar 18, 2021, 6:07 PM IST

ಬೆಂಗಳೂರು:ಸೈಬರ್, ಎಕನಾಮಿಕ್ಸ್ ಅಂಡ್ ನಾರ್ಕೋಟಿಕ್ (ಸಿಇಎನ್) ಪೊಲೀಸ್ ಠಾಣೆಗಳ ಅಗತ್ಯತೆಗಳನ್ನು ಗಮನಿಸಿ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನಗರದಲ್ಲಿರುವ 8 ಸಿಇಎನ್ ಪೊಲೀಸ್ ಠಾಣೆಗಳಿಗೆ ಸೂಕ್ತ ಮೂಲ ಸೌಕರ್ಯಗಳನ್ನೇ ಒದಗಿಸಿಕೊಟ್ಟಿಲ್ಲ ಎಂದು ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ನಗರದಲ್ಲಿರುವ ಸಿಇಎನ್ ಪೊಲೀಸ್ ಠಾಣೆಗಳಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗಿದೆಯೇ ಎಂದು ಸರ್ಕಾರಕ್ಕೆ ಪ್ರಶ್ನಿಸಿದ ಪೀಠ, ಠಾಣೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳೇನು ಎಂಬುದನ್ನು ಪರಿಶೀಲಿಸಿ ಅಗತ್ಯ ಸಿಬ್ಬಂದಿ, ಸಾಫ್ಟ್​​ವೇರ್ ಹಾಗೂ ಸಾಧನಗಳನ್ನು ಒದಗಿಸಿಕೊಡುವಂತೆ ಸೂಚಿಸಿತು. ಹಾಗೆಯೇ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡದ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿತು.

ಇದೇ ವೇಳೆ ಸಿಇಎನ್ ಪೊಲೀಸ್ ಠಾಣೆಗಳ ಕಾರ್ಯವೈಖರಿ ಪರಿಶೀಲಿಸುವ ನಿಟ್ಟಿನಲ್ಲಿ ಈ ಠಾಣೆಗಳಲ್ಲಿ ಎಷ್ಟು ಪ್ರಕರಣಗಳಿವೆ, ಎಷ್ಟು ಎಫ್ಐಆರ್ ದಾಖಲಿಸಲಾಗಿದೆ, ಎಷ್ಟರಲ್ಲಿ ತನಿಖೆ ಮುಂದುವರೆದಿದೆ ಮತ್ತು ಎಷ್ಟು ಪ್ರಕರಣಗಳಲ್ಲಿ ಚಾರ್ಜ್​ಶೀಟ್ ಸಲ್ಲಿಸಲಾಗಿದೆ ಎಂಬ ವಿವರಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿತು.

ABOUT THE AUTHOR

...view details