ಕರ್ನಾಟಕ

karnataka

ETV Bharat / state

ನ್ಯಾಯಾಲಯಗಳಿಗೆ ಬರುವವರಿಗೆ ಆ್ಯಂಟಿಜೆನ್ ಟೆಸ್ಟ್ ನಡೆಸಲು ಹೈಕೋರ್ಟ್ ಸೂಚನೆ - High Court

ಕೊರೊನಾ ನಡುವೆ ಫಿಸಿಕಲ್ ನ್ಯಾಯಾಲಯಗಳು ಪ್ರಾರಂಭವಾಗುತ್ತಿದ್ದು, ಕೋರ್ಟ್ ಗೆ ಹಾಜರಾಗುವ ಸಾಕ್ಷಿದಾರರು ಮತ್ತು ಆರೋಪಿಗಳಿಗೆ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

Highcourt
Highcourt

By

Published : Sep 26, 2020, 7:21 PM IST

ಬೆಂಗಳೂರು : ರಾಜ್ಯದ ನ್ಯಾಯಾಲಯಗಳಲ್ಲಿ ಸದ್ಯದಲ್ಲೇ ಫಿಸಿಕಲ್ ಕೋರ್ಟ್ ಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಗಳಿಗೆ ಹಾಜರಾಗುವ ಸಾಕ್ಷಿದಾರರು ಹಾಗೂ ಆರೋಪಿಗಳಿಗೆ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೊರೊನಾ ನಡುವೆಯೂ ನ್ಯಾಯಾಲಯಗಳು ಸುರಕ್ಷಿತವಾಗಿ ಮತ್ತು ನಿರಂತರವಾಗಿ ನಡೆಸುವ ನಿಟ್ಟಿನಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ನ್ಯಾಯಾಲಯಗಳಲ್ಲಿ ಭೌತಿಕ ಕಲಾಪ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ನ್ಯಾಯಾಲಯಗಳಿಗೆ ಬರುವ ಆರೋಪಿಗಳು ಹಾಗೂ ಸಾಕ್ಷೀದಾರರಿಗೆ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಬೇಕು ಎಂದು ಸೂಚಿಸಿದೆ. ಸಂಚಾರಿ ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಸಾಧ್ಯವಿರುವ ಕುರಿತು ಪರಿಶೀಲಿಸುವಂತೆಯೂ ಸರ್ಕಾರಕ್ಕೆ ನಿರ್ದೇಶಿಸಿದೆ.

ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಇದೇ 28ರ ಸೋಮವಾರದಿಂದ 55 ನ್ಯಾಯಾಲಯಗಳಲ್ಲಿ ಫಿಸಿಕಲ್ ಕೋರ್ಟ್ ಆರಂಭವಾಗಲಿದೆ. ಇನ್ನುಳಿದ ನ್ಯಾಯಾಲಯಗಳಲ್ಲಿ ಅಕ್ಟೋಬರ್ 5 ಮತ್ತು 12 ರಿಂದ ಫಿಸಿಕಲ್ ಕೋರ್ಟ್ ಗಳು ಕಾರ್ಯಾರಂಭ ಮಾಡಲಿವೆ.

ABOUT THE AUTHOR

...view details