ಕರ್ನಾಟಕ

karnataka

ETV Bharat / state

ಸಂಗೋಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣಕ್ಕೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ - Public interest petition

ನಗರದ ಚಾಮರಾಜಪೇಟೆ ವಿಠ್ಠಲ್ ನಗರದ ಪಾರ್ಕ್​ನಲ್ಲಿ ನಿರ್ಮಾಣವಾಗುತ್ತಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕಾಮಗಾರಿಗೆ ಹೈಕೋರ್ಟ್ ಮದ್ಯಂತರ ತಡೆ ನೀಡಿ ಆದೇಶಿಸಿದೆ. ಪುತ್ಥಳಿ ನಿರ್ಮಾಣಕ್ಕೆ ತಡೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಸಂಗೋಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣಕ್ಕೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ

By

Published : Aug 14, 2019, 11:48 PM IST

ಬೆಂಗಳೂರು:ನಗರದ ಚಾಮರಾಜಪೇಟೆ ವಿಠ್ಠಲ್‌ ನಗರದ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣದ ಕಾಮಾಗಾರಿಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ.

ಕಾಮಗಾರಿ ತಡೆ ಕೋರಿ ವಿಠ್ಠಲ್‌ ನಗರ ನಿವಾಸಿ ಎಂ.ಪಿ.ನಟರಾಜು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲ ಪಾರ್ಕ್‌ನಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡುವುದರಿಂದ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.

ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿಗಳಿದ್ದ ‌ವಿಭಾಗೀಯ ಪೀಠ, ಸಂಗೋಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣಕ್ಕೆ ಮಧ್ಯಂತರ ತಡೆ ನೀಡಿ‌, ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿಕೆ

ABOUT THE AUTHOR

...view details