ಕರ್ನಾಟಕ

karnataka

ETV Bharat / state

ಶಿವಮೂರ್ತಿ ಶರಣರ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ - etv bharat kannada

ಬಾಲಕಿಯರ ಅತ್ಯಾಚಾರ ಆರೋಪ ಸಂಬಂಧ ಶಿವಮೂರ್ತಿ ಶರಣರ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

high-court-interim-stay-on-hearing-of-witnesses-against-shivamurthy-sharan
ಶಿವಮೂರ್ತಿ ಶರಣರ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

By

Published : Jun 2, 2023, 9:16 PM IST

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರವೆಸಗಿದ ಆರೋಪದಲ್ಲಿ, ವಿಚಾರಣಾ ಕೈದಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ, ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್‌ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಎರಡು ಕ್ರಿಮಿನಲ್‌ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಾಕ್ಷಿಗಳ ವಿಚಾರಣೆಗೆ ಜುಲೈ.1ರವರೆಗೆ ಮಧ್ಯಂತರ ತಡೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್‌, ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಶರಣರ ವಿರುದ್ಧ ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು 2023ರ ಏಪ್ರಿಲ್‌. 20ರಂದು ಆದೇಶಿಸಿತ್ತು. ಈ ಆದೇಶ ದೋಷಪೂರಿತವಾಗಿದ್ದು, ಇದಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಚಿತ್ರದುರ್ಗ ಸೆಷನ್ಸ್‌ ನ್ಯಾಯಾಲಯದಲ್ಲಿನ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ 2023ರ ಜುಲೈ. 1ರವರೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ ಏನು?:ಮುರುಘಾ ಮಠದ ಹಾಸ್ಟೆಲ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಮೈಸೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ದಾಖಲಾದ ಎರಡು ದಿನಗಳ ನಂತರ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಕ್ಟೋಬರ್‌ನಲ್ಲಿ ಶ್ರೀಗಳ ವಿರುದ್ಧ ಇನ್ನೂ ಕೆಲವು ಬಾಲಕಿಯರು ಇಂತಹುದೇ ದೂರು ನೀಡಿದ್ದರು.

ಶಿವಮೂರ್ತಿ ಶರಣರ ವಿರುದ್ಧ ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸೆಷನ್ಸ್‌ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು. ಇದೇ ಆರೋಪದಲ್ಲಿ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದ ಬಗ್ಗೆ ಈ ಹಿಂದೆ ಮುರುಘಾಶ್ರೀ ಭಕ್ತರಲ್ಲಿ ಒಬ್ಬರಾದ ಜೀತೇಂದ್ರ ಎಂಬುವರು ಮಾತನಾಡಿ, ಶ್ರೀಗಳ ಬಗ್ಗೆ ಸುಳ್ಳು ದೂರು ದಾಖಲಾಗಿದೆ ಎಂದು ಮೊದಲೇ ಗೊತ್ತಿತ್ತು. ಈಗ ಮಾಧ್ಯಮಗಳಲ್ಲಿ ಬಾಲಕಿಯರ ಮೇಲೆ ಯಾವುದೇ ಅತ್ಯಾಚಾರ ಆಗಿಲ್ಲ ಎಂದು ವೈದ್ಯರು ಕೋರ್ಟ್​ಗೆ ರಿಪೋರ್ಟ್​ ಸಲ್ಲಿಸಿದ್ದಾರೆ ಎಂದು ವರದಿ ಆಗುತ್ತಿದೆ. ಶ್ರೀಗಳಿಗೆ ನ್ಯಾಯ ಸಿಗಲಿದೆ ಎಂದಿದ್ದರು.

ಇದನ್ನೂ ಓದಿ:ಮುರುಘಾ ಶರಣರ ವಿರುದ್ಧದ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಾಧ್ಯತೆ​.. ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ವೈದ್ಯರ ರಿಪೋರ್ಟ್​​​!

ABOUT THE AUTHOR

...view details