ಬೆಂಗಳೂರು: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಗಳನ್ನು ಪರಿಗಣಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯರೂ ಆದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ, ಕೇಂದ್ರ ಕಾನೂನು ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಖುದ್ದು ಸುಬ್ರಹ್ಮಣಿಯಂ ಸ್ವಾಮಿ ಹಾಜರಾಗಿ, ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಅವರು ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ, ಆದರೆ, ಸರ್ಕಾರ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕೊಡವಾ ನ್ಯಾಷನಲ್ ಕೌನ್ಸಿಲ್‌ನ್ನು ಅರ್ಜಿಯನ್ನು ಪಕ್ಷಗಾರರನ್ನಾಗಿ ಮಾಡಲಾಗಿದಿಯೇ ಎಂದು ಪ್ರಶ್ನಿಸಿತು. ಅವರು ಪ್ರತಿವಾದಿಗಳ್ನಾಗಿ ಮಾಡಲಾಗಿದೆ ಎಂದು ಸೂಚನೆ ನೀಡಿದರು.