ಕರ್ನಾಟಕ

karnataka

ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಮೂರ್ತಿಗಳು

By

Published : Sep 30, 2022, 8:47 PM IST

ಹೈಕೋರ್ಟ್​ನಲ್ಲಿ ಖಾಯಂಗೊಂಡ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರಿಂದ ಪ್ರಮಾಣ ವಚನ
ರಾಜ್ಯಪಾಲರಿಂದ ಪ್ರಮಾಣ ವಚನ

ಬೆಂಗಳೂರು: ಹೈಕೋರ್ಟ್​ನಲ್ಲಿ ಖಾಯಂಗೊಂಡ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾದ್ದ ಮೊಹಮ್ಮದ್ ಗೌಸ್ ಶುಕುರೆ ಕಮಾಲ್, ರಾಜೇಂದ್ರ ಬದಾಮಿಕರ್ ಹಾಗೂ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನ್ಯಾಯಮೂರ್ತಿಗಳ ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

(ಓದಿ: ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆಯಾಗಿ ಪ್ರಸನ್ನ ಬಿ ವರಾಲೆ)

ABOUT THE AUTHOR

...view details