ಕರ್ನಾಟಕ

karnataka

ETV Bharat / state

ಮ್ಯಾನ್ ಹೋಲ್​​ನಲ್ಲಿ ಕಾರ್ಮಿಕರ ಸಾವು ಪ್ರಕರಣ: ವರದಿ ಹಿಂಪಡೆಯುವುದಾಗಿ ಹೈಕೋರ್ಟ್​ಗೆ ಮಾಹಿತಿ - Bangalore

ಮನುಷ್ಯರಿಂದ ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಐಸಿಸಿಟಿಯು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High Court
ಹೈಕೋರ್ಟ್

By

Published : Mar 16, 2021, 10:25 PM IST

ಬೆಂಗಳೂರು: ಕಲಬುರಗಿ ಜಿಲ್ಲೆಯ ಕೈಲಾಶ್ ನಗರದಲ್ಲಿ ಮ್ಯಾನ್‌ಹೋಲ್​ಗೆ ಇಳಿದು ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಪ್ರಕರಣದ ಸಂಬಂಧ ಕಾರ್ಯಕಾರಿ ಇಂಜಿನಿಯರ್ ಸಲ್ಲಿಸಿದ ವರದಿಯನ್ನು ಹಿಂಪಡೆದುಕೊಳ್ಳುತ್ತೇವೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಮನುಷ್ಯರಿಂದ ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಐಸಿಸಿಟಿಯು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕಾರಿ ಇಂಜಿನಿಯರ್ ಸಲ್ಲಿಸಿರುವ ವರದಿಯನ್ನು ವಾಪಸ್ ಪಡೆದು ಹೊಸದಾಗಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು. ಇದನ್ನು ಪರಿಗಣಿಸಿದ ಪೀಠ, ಹೊಸದಾಗಿ ವರದಿ ಸಲ್ಲಿಸಲು ಅನುಮತಿ ನೀಡಿತು.

ಹಿಂದಿನ ವರದಿಯಲ್ಲಿ 'ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಮ್ಯಾನ್‌ ಹೋಲ್‌ಗೆ ಬಿದ್ದು ಸಾವನ್ನಪ್ಪಿದ್ದಾರೆ' ಎಂದು ಕಾರ್ಯಕಾರಿ ಇಂಜಿನಿಯರ್ ಹೇಳಿದ್ದರು. ಇದಕ್ಕೆ ಆಕ್ಷೇಪಿಸಿದ್ದ ಪೀಠ, ಸಮರ್ಪಕ ತನಿಖೆ ನಡೆಸದೆ ವರದಿ ಸಲ್ಲಿಸಿದಂತಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಹಿಂದಿನ ವಿಚಾರಣೆ ವೇಳೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ವರದಿ ವಾಪಸ್ ಪಡೆದುಕೊಂಡು ಹೊಸದಾಗಿ ವರದಿ ಸಲ್ಲಿಸಲಾಗುವುದು ಎಂದು ಮಂಡಳಿ ಪರ ವಕೀಲರು ಹೇಳಿದರು.

ಮನುಷ್ಯರಿಂದ ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕಾಲ ಕಾಲಕ್ಕೆ ನೀಡಿರುವ ನಿರ್ದೇಶನಗಳನ್ನು ಪಾಲಿಸಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಸೂಚಿಸಿದ ಪೀಠ ವಿಚಾರಣೆ ಮುಂದೂಡಿತು.

ABOUT THE AUTHOR

...view details