ಬೆಂಗಳೂರು:ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಇರುವ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿ ವ್ಯಾಪರ ಮಾಡ್ತಿರುವುದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವ್ಯಾಪಾರಿಗಳ ಅಕ್ರಮ ಪ್ರವೇಶ ಪ್ರಕರಣ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ - ವ್ಯಾಪಾರಿಗಳ ಅಕ್ರಮ ಪ್ರವೇಶ ಪ್ರಕರಣ
ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಇರುವ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿ ವ್ಯಾಪರ ಮಾಡ್ತಿರುವುದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಅರ್ಜಿದಾರರ ಪರ ವಾದಿಸಿದ ವಕೀಲರು, ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್ ಪಾಸ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಇನ್ನು ಈ ಸಂಬಂಧ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.