ಕರ್ನಾಟಕ

karnataka

By

Published : Mar 19, 2020, 7:27 PM IST

ETV Bharat / state

ಏಕರೂಪ ಮಾರ್ಗಸೂಚಿ ಕೋರಿ ಪಿಐಎಲ್: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಕರ್ನಾಟಕವೂ ಸೇರಿದಂತೆ ದೇಶದಲ್ಲಿರುವ ಹಲವು ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲ. ಅಧ್ಯಕ್ಷರ ನೇಮಕಾತಿಗೆ ಸೂಕ್ತ ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್​ ನೋಟಿಸ್​ ಕಳಿಸಿದೆ.

High Court
ಹೈಕೋರ್ಟ್

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಏಕರೂಪ ಮಾರ್ಗಸೂಚಿ ರಚಿಸವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಬೆಂಗಳೂರಿನ ನಿವಾಸಿಗಳಾದ ವಿ.ಡಿ. ವೆಂಕಟೇಶ್ ಮತ್ತು ಎಸ್.ವಿಜಯ್ ಎಂಬುವರು ಸಲ್ಲಿಸಿರುವ ಪಿಐಎಲ್​ಅನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ‌ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಕೇಂದ್ರ ಕಾನೂನು ಸಚಿವಾಲಯ, ಪರಿಸರ-ಅರಣ್ಯ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ-ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು.

ಅರ್ಜಿದಾರರ ಕೋರಿಕೆ:

ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದಲ್ಲಿರುವ ಹಲವು ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲ. ಅಧ್ಯಕ್ಷರ ನೇಮಕಾತಿಗೆ ಸೂಕ್ತ ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಆದೇಶಿಸಿದೆ. ಇದರ ಹೊರತಾಗಿಯೂ ಕರ್ನಾಟಕ ರಾಜ್ಯ ಸರ್ಕಾರ‌ ಮಾರ್ಗಸೂಚಿ ರಚಿಸದೇ ಕೆಎಸ್‌ಪಿಸಿಬಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಆದ್ದರಿಂದ ದೇಶದ ಎಲ್ಲಾ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಏಕರೂಪ ಮಾರ್ಗಸೂಚಿ ರಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details