ಕರ್ನಾಟಕ

karnataka

By

Published : Feb 19, 2020, 10:14 PM IST

ETV Bharat / state

ಚುನಾವಣಾ ಅಕ್ರಮ ಆರೋಪ: ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಲು ಶಿಕ್ಷಕೇತರ ಸಿಬ್ಬಂದಿಯನ್ನೂ ಮತದಾರರ ಪಟ್ಟಿಗೆ‌ ಸೇರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಪಿಐಎಲ್ ಸಂಬಂಧ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

high-court-notice-to-election-commission-of-india
ಚುನಾವಣಾ ಅಕ್ರಮ ಆರೋಪ : ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಲು ಶಿಕ್ಷಕೇತರ ಸಿಬ್ಬಂದಿಯನ್ನೂ ಮತದಾರರ ಪಟ್ಟಿಗೆ‌ ಸೇರಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಸಂಬಂಧ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆ ಮತದಾರರ ಪಟ್ಟಿಗೆ ಅನರ್ಹ ಮತದಾರರನ್ನು ಸೇರಿಸಲಾಗಿದ್ದು, ಆ ಪಟ್ಟಿಗೆ ತಡೆ ನೀಡಬೇಕು. ಹಾಗೆಯೇ ಮತದಾರರ ನೋಂದಣಿ ಮೇಲುಸ್ತುವಾರಿ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತಾರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನ್ಯೂ ಇಂಡಿಯಾ ವೋಟರ್ಸ್ ಫೋರಂ‌‌‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ABOUT THE AUTHOR

...view details