ಕರ್ನಾಟಕ

karnataka

ETV Bharat / state

ಬಿಬಿಎಂಪಿ ವ್ಯಾಪ್ತಿಗೆ ದೊಡ್ಡತೋಗೂರು ಗ್ರಾಪಂ ಸೇರಿಸಲು ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - ಬಿಬಿಎಂಪಿ ಚುನಾವಣೆ

ಹೈಕೋರ್ಟ್​ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ಇಲಾಖೆ ನಿರ್ದೇಶಕ, ದೊಡ್ಡತೋಗೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

High Court notice to govt
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Dec 26, 2020, 5:23 PM IST

ಬೆಂಗಳೂರು:ದೊಡ್ಡತೋಗೂರು ಗ್ರಾಮ ಪಂಚಾಯಿತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಸೇರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ದೊಡ್ಡತೋಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಮ್ಮದೇವನಹಳ್ಳಿ ನಿವಾಸಿ ಬಿ.ಎ.ಚೈತ್ರ ಅನಿಲ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ಇಲಾಖೆ ನಿರ್ದೇಶಕ, ದೊಡ್ಡತೋಗೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಫೆ. 4ಕ್ಕೆ ಮುಂದೂಡಿದೆ.

ದೊಡ್ಡತೋಗೂರು ಗ್ರಾಮ ಪಂಚಾಯಿತಿ ಬಿಬಿಎಂಪಿ ಸರಹದ್ದಿನಲ್ಲಿದ್ದು, ಇನ್ಫೋಸಿಸ್ ಸೇರಿದಂತೆ ಹಲವು ಐಟಿ ಕಂಪನಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ಭೂಮಿ ಇಲ್ಲವಾಗಿದ್ದು, ವಾಣಿಜ್ಯಾತ್ಮಕವಾಗಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ದೊಡ್ಡತೋಗೂರಿನಲ್ಲಿ 8 ಸಾವಿರ ಜನಸಂಖ್ಯೆ, ಬೆಟ್ಟದಾಸನಪುರದಲ್ಲಿ 6, ಮೈಲಸಂದ್ರದಲ್ಲಿ 4, ವಿಟ್ಟಸಂದ್ರ ಮತ್ತು ಹೊಮ್ಮದೇವನಹಳ್ಳಿಯಲ್ಲಿ ತಲಾ 4 ಸಾವಿರ ಜನಸಂಖ್ಯೆ ಇದೆ.

ಹಿಂದೊಮ್ಮೆ ಈ ಗ್ರಾಮ ಪಂಚಾಯಿತಿಯನ್ನು ಪುರಸಭೆಯಾಗಿ ಘೋಷಣೆ ಮಾಡಿದ್ದರೂ ಈವರೆಗೂ ಜಾರಿಗೆ ಬಂದಿಲ್ಲ. ಈ ಬಾರಿ ಗ್ರಾಪಂಗೆ ಚುನಾವಣೆಯನ್ನೂ ಘೋಷಿಸಲಿಲ್ಲ. ಆದ್ದರಿಂದ ದೊಡ್ಡತೋಗೂರು ಗ್ರಾಮ ಪಂಚಾಯಿತಿಯನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ನಿರ್ದೇಶಸಬೇಕು ಎಂದು ಮನವಿ ಮಾಡಲಾಗಿತ್ತು.

ಇದನ್ನೂ ಓದಿ:ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆ : ಕೋವಿಡ್​ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬಿಬಿಎಂಪಿ

ABOUT THE AUTHOR

...view details