ಕರ್ನಾಟಕ

karnataka

ETV Bharat / state

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಆರೋಪ: ಐಪಿಎಸ್ ಅಧಿಕಾರಿ ಗುಳೇದ್​ಗೆ ಹೈಕೋರ್ಟ್ ನೋಟಿಸ್ - ಐಪಿಎಸ್ ಅಧಿಕಾರಿ ಗುಳೇದ್​ ವಿರುದ್ಧ ಅಕ್ರಮ ಸಂಬಂಧ ಆರೋಪ

ಐಪಿಎಸ್ ಅಧಿಕಾರಿ ಭೀಮಾಶಂಕರ್ ಎಸ್. ಗುಳೇದ್ ವಿರುದ್ಧದ ಅಕ್ರಮ ಸಂಬಂಧ ಆರೋಪ ಕುರಿತಂತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

High Court notice to IPS officer Guled
ಐಪಿಎಸ್ ಅಧಿಕಾರಿ ಗುಳೇದ್​ ವಿರುದ್ಧ ಅಕ್ರಮ ಸಂಬಂಧ ಆರೋಪ

By

Published : Dec 14, 2020, 10:50 PM IST

ಬೆಂಗಳೂರು: ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಆರೋಪದಡಿ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಐಪಿಎಸ್ ಅಧಿಕಾರಿ ಭೀಮಾಶಂಕರ್ ಎಸ್. ಗುಳೇದ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಐಪಿಎಸ್ ಅಧಿಕಾರಿ ಗುಳೇದ್ ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡು ಕಿರುಕುಳ ನೀಡಿದ್ದ ವಿಚಾರವಾಗಿ ಪೊಲೀಸರಿಗೆ ದೂರು ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿ ಪಿ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಕೇಂದ್ರ ಗೃಹ ಇಲಾಖೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹ ಸಚಿವಾಲಯ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ಕೋರಮಂಗಳ ಠಾಣೆ ಇನ್ಸ್​ಪೆಕ್ಟರ್ ಹಾಗೂ ಐಪಿಎಸ್ ಅಧಿಕಾರಿ ಭೀಮಾಶಂಕರ್ ಎಸ್. ಗುಳೇದ್ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.

ಇದನ್ನೂ ಓದಿ : ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಅರ್ಜಿದಾರರು, ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್ ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡು ತಮಗೆ ಕಿರುಕುಳ ನೀಡಿದ್ದರು. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಗೆ 2018ರಲ್ಲಿ ದೂರು ನೀಡಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ಸೂಚನೆ ಇದ್ದರೂ, ಇಲಾಖಾ ತನಿಖೆ ನೆಪದಲ್ಲಿ ಕ್ರಮ ತೆಗೆದುಕೊಳ್ಳದೇ ಪ್ರಕರಣವನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದ್ದರು. ಹಾಗೆಯೇ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ ಅಧಿಕಾರಿ ಗುಳೇದ್ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

For All Latest Updates

TAGGED:

ABOUT THE AUTHOR

...view details