ಕರ್ನಾಟಕ

karnataka

ETV Bharat / state

ಮಕ್ಕಳ ಸಮವಸ್ತ್ರ: ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೊರ್ಟ್ ಸೂಚನೆ - ಆರ್‌ಟಿಇ

ಆರ್‌ಟಿಇ ಯಡಿ ಪ್ರವೇಶ ಪಡೆದುಕೊಂಡ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ಮಾತ್ರ ವಿತರಿಸಲಾಗಿದೆ. ಎರಡನೇ ಜೊತೆ ಸಿದ್ದಪಡಿಸಿದ ಸಮವಸ್ತ್ರ ಈವರೆಗೆ ವಿತರಿಸಲಾಗಿಲ್ಲ. ಇದರಿಂದ ಬಡ ಮಕ್ಕಳಿಗೆ ಸಮವಸ್ತ್ರ ಇಲ್ಲದೇ ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಲಾಗಿದೆ.

ಹೈಕೊರ್ಟ್

By

Published : Aug 8, 2019, 10:36 PM IST

ಬೆಂಗಳೂರು:ಆರ್‌ಟಿಇ ಕಾಯ್ದೆಯ ವ್ಯಾಪ್ತಿಗೊಳಪಡುವ 2019-20ನೇ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳಿಗೆ ಎರಡು ಜೊತೆ ಹೊಲಿದ ಸಮವಸ್ತ್ರಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ನಿರ್ದೇಶನ ನೀಡಿದೆ.

ಈ ಕುರಿತು ಕೊಪ್ಪಳ ಜಿಲ್ಲೆಯ ಮಂಜುನಾಥ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆ ಮಾಡಿ ಆರ್‌ಟಿಇಯಡಿ ಪ್ರವೇಶ ಪಡೆದುಕೊಂಡ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ಮಾತ್ರ ವಿತರಿಸಲಾಗಿದೆ. ಎರಡನೇ ಜೊತೆ ಸಿದ್ದಪಡಿಸಿದ ಸಮವಸ್ತ್ರ ಈವರೆಗೆ ವಿತರಿಸಲಾಗಿಲ್ಲ. ಇದರಿಂದ ಬಡ ಮಕ್ಕಳಿಗೆ ಸಮವಸ್ತ್ರ ಇಲ್ಲದೇ ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 26ಕ್ಕೆ ಮುಂದೂಡಿಕೆ ಮಾಡಿದೆ.

ABOUT THE AUTHOR

...view details