ಕರ್ನಾಟಕ

karnataka

ETV Bharat / state

ಅನಧಿಕೃತ ಮಂದಿರ, ಮಸೀದಿ, ಚರ್ಚ್‌ ಕಟ್ಟಿದ್ರೇ ಮುಲಾಜಿಲ್ಲದೇ ತೆರವುಗೊಳಿಸಿ - ಖಾಕಿಗೆ ಹೈಕೋರ್ಟ್ ಸೂಚನೆ - High Court order

ಸಾರ್ವಜನಿಕ ಸಂಪತ್ತು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಮೋಟೊ ದೂರು ದಾಖಲಿಸಿಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ. ‌

ಹೈಕೋರ್ಟ್

By

Published : Jun 22, 2019, 8:10 AM IST

ಬೆಂಗಳೂರು: ಸಾರ್ವಜನಿಕರ ಯಾವುದೇ ಸ್ವತ್ತನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಮೋಟೊ (ಸ್ವಯಂಪ್ರೇರಿತ) ದೂರು ದಾಖಲಿಸಿಕೊಳ್ಳುವಂತೆ ರಿಜಿಸ್ಟ್ರಾರ್ ಜನರಲ್​ಗೆ ಹೈಕೋರ್ಟ್ ಆದೇಶ ನೀಡಿದೆ. ‌

ಮಾಗಡಿ ರಸ್ತೆಯ ಬಳಿ ಇರುವ ವಸತಿ ನಿಲಯ ಪ್ರದೇಶದಲ್ಲಿ ಅಕ್ರಮವಾಗಿ ಸಾಯಿಬಾಬಾ ದೇವಸ್ಥಾನ ನಿರ್ಮಿಸುತ್ತಿದ್ದನ್ನ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ನಡೆಯಿತು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಸುಪ್ರೀಂಕೋರ್ಟ್​ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ಸ್ಥಾಪಿಸುವವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳುವಂತೆ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ದೇವಸ್ಥಾನ, ಮಸೀದಿ, ಚರ್ಚ್​ಗಳನ್ನ ಅನಧಿಕೃತವಾಗಿ ನಿರ್ಮಿಸಿದರೆ ಅವುಗಳನ್ನ ತೆರವುಗೊಳಿಸಬೇಕೆಂದು ನೀಡಿದ್ದ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲೀಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದೆ.

ABOUT THE AUTHOR

...view details