ಕರ್ನಾಟಕ

karnataka

ಡಿಸಿ ರೋಹಿಣಿ-ಶರತ್ ವರ್ಗಾವಣೆ ವಿವಾದ: ನಾಗರಿಕ ಸೇವಾ ಮಂಡಳಿ ರಚನೆಗೆ ಹೈಕೋರ್ಟ್ ಆದೇಶ

By

Published : Jul 8, 2021, 6:20 PM IST

ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಿ. ಶರತ್ ಅವರನ್ನು ಅವಧಿಗೆ ಮುನ್ನವೇ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ಕ್ರಮ ಆಕ್ಷೇಪಿಸಿದ್ದ ಬಿ. ಶರತ್ ಅಕ್ಟೋಬರ್ ಮೊದಲ ವಾರದಲ್ಲಿ ಸಿಎಟಿ ಮೆಟ್ಟಿಲೇರಿದ್ದರು.

high-court-order-for-creation-of-civil-service-board-in-issue-of-dc-transfer
ಡಿಸಿ ರೋಹಿಣಿ-ಶರತ್ ವರ್ಗಾವಣೆ ವಿವಾದ

ಬೆಂಗಳೂರು: ಕಳೆದ ವರ್ಷ ಮೈಸೂರು ಡಿಸಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಲು ತನ್ನನ್ನು ವರ್ಗಾವಣೆ ಮಾಡಿದ ಕ್ರಮ ಸರಿಯಲ್ಲ ಎಂದು ಆರೋಪಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ನಾಗರಿಕ ಸೇವಾ ಮಂಡಳಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಸಿಎಟಿ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ. ಶರತ್ ಹೈಕೋರ್ಟ್​​ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿದ ಕ್ರಮವನ್ನು ಕಾನೂನು ರೀತಿ ಮರುಪರಿಶೀಲನೆ ಮಾಡುವಂತೆ ನಿರ್ದೇಶಿಸಿ, ಸಿಎಟಿ ಆದೇಶವನ್ನೂ ಎತ್ತಿ ಹಿಡಿದಿದೆ. ಹಾಗೆಯೇ, ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಮುಂದಿನ ಎರಡು ತಿಂಗಳಲ್ಲಿ ನಾಗರಿಕ ಸೇವಾ ಮಂಡಳಿ ರಚಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಿ. ಶರತ್ ಅವರನ್ನು ಅವಧಿಗೆ ಮುನ್ನವೇ ವರ್ಗಾವಣೆ ಮಾಡಿತ್ತು. 2020ರ ಆ.29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿ. ಶರತ್ ಅವರನ್ನು ಸೆ.28ರಂದು, ಅಂದರೆ ಒಂದು ತಿಂಗಳು ತುಂಬುವ ಮುನ್ನವೇ ಹುದ್ದೆಯಿಂದ ತೆರವುಗೊಳಿಸಿತ್ತು. ಸರ್ಕಾರದ ಈ ಕ್ರಮ ಆಕ್ಷೇಪಿಸಿದ್ದ ಬಿ. ಶರತ್ ಅಕ್ಟೋಬರ್ ಮೊದಲ ವಾರದಲ್ಲಿ ಸಿಎಟಿ ಮೆಟ್ಟಿಲೇರಿದ್ದರು.

ಸೇವಾ ನಿಯಮಗಳನ್ನು ಉಲ್ಲಂಘಿಸಿ 2 ವರ್ಷ ತುಂಬುವ ಮೊದಲೇ ತನ್ನನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸಿಎಟಿ 2021ರ ಮಾರ್ಚ್ 29ರಂದು ಆದೇಶ ನೀಡಿ, ಶರತ್ ವರ್ಗಾವಣೆಯನ್ನು ಸಕ್ಷಮ ಪ್ರಾಧಿಕಾರ ಮರುಪರಿಶೀಲಿಸಬೇಕು ಹಾಗೂ ಅಧಿಕಾರಿಗಳ ವರ್ಗಾವಣೆಗೆ ನಾಗರಿಕ ಸೇವಾ ಮಂಡಳಿ ರಚಿಸಬೇಕು ಎಂದು ನಿರ್ದೇಶಿಸಿತ್ತು.

ಇದನ್ನೂ ಓದಿ:ಯೋಗೀಶ್‌ ಗೌಡ ಕೊಲೆ ಪ್ರಕರಣ: ಜಿ.ಪಂ ಉಪಾಧ್ಯಕ್ಷ ಕರಿಗಾರ, ನಾಗರಾಜ ಗೌರಿಗೆ ಸಿಬಿಐ ಬುಲಾವ್

ABOUT THE AUTHOR

...view details