ಕರ್ನಾಟಕ

karnataka

ETV Bharat / state

ಮರ ಕಡಿಯದಂತೆ ಬಿಎಂಆರ್​ಸಿಎಲ್​ಗೆ ಹೈಕೋರ್ಟ್ ಸೂಚನೆ - ಬಿಎಂಆರ್​ಸಿಎಲ್

ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅಸಂಖ್ಯ ಮರಗಳನ್ನು ಕತ್ತರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಮಾಡುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರು ಪರಿಸರ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಎಸ್​ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಮರಗಳ ಕಟಾವಿಗೆ ಹೈಕೋರ್ಟ್​ ತಡೆ
ಮರಗಳ ಕಟಾವಿಗೆ ಹೈಕೋರ್ಟ್​ ತಡೆ

By

Published : Jan 28, 2020, 2:40 AM IST

ಬೆಂಗಳೂರು:ಅಭಿವೃದ್ಧಿ ಕಾಮಗಾರಿಗಳಿಗೆ ಮರಗಳನ್ನು ತೆರವು ಮಾಡುವ ಕುರಿತಂತೆ ತಜ್ಞರು ಮಾರ್ಗಸೂಚಿ ರೂಪಿಸುವವರೆಗೂ ಯಾವುದೇ ಮರ ಕಡಿಯಬಾರದು ಎಂದು ಹೈಕೋರ್ಟ್ ಬಿಎಂಆರ್​ಸಿಎಲ್​ಗೆ ಸೂಚನೆ ನೀಡಿದೆ.

ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅಸಂಖ್ಯ ಮರಗಳನ್ನು ಕತ್ತರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಮಾಡುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರು ಪರಿಸರ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಎಸ್​ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಹಿಂದಿನ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದಂತೆ ಮರಗಳ ಗಣತಿ ಕಾರ್ಯ ಆರಂಭಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಮರ ವಿಜ್ಞಾನ ಸಂಸ್ಥೆಯ ಪರ ವಕೀಲರು, ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ವೆಬ್‌ಸೈಟ್ ರೂಪಿಸಿದ್ದೇವೆ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ವೆಬ್‌ಸೈಟ್ ರೂಪಿಸಿದ ಮಾತ್ರಕ್ಕೆ ಮರಗಳ ಗಣತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆಯೇ? ಎಂದು ಕಟುವಾಗಿ ಪ್ರಶ್ನಿಸಿತು. ನಂತರ ಮರಗಳ ಗಣತಿಯನ್ನು ಯಾವಾಗ ಆರಂಭಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಬೇಕು ಎಂದು ತಾಕೀತು ಮಾಡಿತು.

ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ವೇಳೆ ಮರಗಳನ್ನು ರಕ್ಷಿಸಲು ಇರುವ ಎಲ್ಲ ಮಾರ್ಗಗಳ್ನು ಅನುಸರಿಸಿದ ನಂತರವೂ ಅವುಗಳನ್ನು ಕತ್ತರಿಸದೆ ಅನ್ಯ ಮಾರ್ಗವಿಲ್ಲ ಎಂದಾಗ ಮಾತ್ರ, ಅವುಗಳನ್ನು ತೆರವು ಮಾಡಲು ಅನುಮತಿ ನೀಡಲು ಸಶಕ್ತವಾದ ಸಮಿತಿ ರಚಿಸುವಂತೆ ಹೈಕೋರ್ಟ್ 2019ರ ಏಪ್ರಿಲ್​ನಲ್ಲಿ ಸರ್ಕಾರ ಮತ್ತು ಬಿಬಿಎಂಪಿಗೆ ಆದೇಶಿಸಿತ್ತು. ಅದರಂತೆ ಸರ್ಕಾರ ಪರಿಸರ, ವಿಜ್ಞಾನ, ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ, ಮರಗಳ ಸಂರಕ್ಷಣೆ ಬಗ್ಗೆ ಸಮಿತಿ ಅನುಸರಿಸಬೇಕಾದ ಕಾರ್ಯ ವಿಧಾನ ಮತ್ತು ಮಾರ್ಗಸೂಚಿಗಳನ್ನು ರೂಪಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿತ್ತು. ಆದರೆ ಈ ವಿಚಾರದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಸರ್ಕಾರ ತಜ್ಞರ ಸಮಿತಿಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳನ್ನು ರೂಪಿಸಿತ್ತು.

ಈ ವರದಿ ಒಳಗೊಂಡ ಪ್ರಮಾಣ ಪತ್ರವನ್ನು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿ ವಕೀಲರ ಮೂಲಕ ಪೀಠಕ್ಕೆ ಸಲ್ಲಿಸಿದರು. ಪ್ರಮಾಣಪತ್ರ ಗಮನಿಸಿ ಬೇಸರ ವ್ಯಕ್ತಪಡಿಸಿದ ಪೀಠ, ತಜ್ಞರ ಸಮಿತಿ ಮಾತ್ರ ಮಾರ್ಗಸೂಚಿಗಳನ್ನು ರಚಿಸಬೇಕಿತ್ತು. ಆದರೆ, ತಜ್ಞರ ಸಮಿತಿಯಿಲ್ಲದೇ ಮಾರ್ಗಸೂಚಿಗಳನ್ನು ರೂಪಿಸಿದ್ದೀರಿ. ಮೇಲಾಗಿ ಮಾರ್ಗಸೂಚಿಗಳಿಗೆ ತಜ್ಞರ ಸಮಿತಿಗೆ ಸಂಬಂಧಪಡದ ವ್ಯಕ್ತಿ (ಡಿಎಫ್‌ಒ) ಪ್ರಮಾಣಪತ್ರಕ್ಕೆ ಸಹಿ ಹಾಕಿದ್ದಾರೆ. ಇಂತಹ ಮಾರ್ಗಸೂಚಿಗಳನ್ನು ಅಂಗೀಕರಿಸಲಾಗದು ಎಂದು ತಿಳಿಸಿದ ಪೀಠ, ಸೂಕ್ತ ರೀತಿಯಲ್ಲಿ ಮಾರ್ಗಸೂಚಿ ರೂಪಿಸುವಂತೆ ತಾಕೀತು ಮಾಡಿತು. ಹಾಗೆಯೇ ಈ ಮಾರ್ಗಸೂಚಿಗಳ ಆಧಾರದ ಮೇಲೆ ಯಾವುದೇ ಕ್ರಮ ಜರುಗಿಸಬಾರದು ಎಂದು ಬಿಎಂಆರ್‌ಸಿಎಲ್‌ಗೆ ನಿರ್ದೇಶಿಸಿತು.

ABOUT THE AUTHOR

...view details