ಕರ್ನಾಟಕ

karnataka

ETV Bharat / state

ಬೆಂಗಳೂರು ವಿವಿ ಕುಲಪತಿ ನೇಮಕ ರದ್ದುಪಡಿಸಿದ ಹೈಕೋರ್ಟ್​​​​​​ - ಅರ್ಹತೆ ಇಲ್ಲದಿದ್ದರೂ ಪ್ರೊಫೆಸರ್ ಹುದ್ದೆ

ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಆರ್ ವೇಣುಗೋಪಾಲ್ ಅವರ ನೇಮಕವನ್ನ ಹೈಕೋರ್ಟ್ ರದ್ದುಗೊಳಿಸಿ ಇಂದು ಆದೇಶ ಹೊರಡಿಸಿದೆ.

ಬೆಂಗಳೂರು ವಿವಿ ಕುಲಪತಿ ನೇಮಕಾತಿ ರದ್ದುಪಡಿಸಿ ಹೈಕೋಟ್ ಆದೇಶ..!

By

Published : Sep 24, 2019, 9:54 PM IST

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಆರ್ ವೇಣುಗೋಪಾಲ್ ಅವರ ನೇಮಕವನ್ನ ಹೈಕೋರ್ಟ್ ರದ್ದುಗೊಳಿಸಿ ಇಂದು ಆದೇಶ ಹೊರಡಿಸಿದೆ.

ಈ ಕುರಿತು ಧಾರವಾಡದ ಡಾ.ಸಂಗಮೇಶ್ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡನೆ ಮಾಡಿ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಆರ್.ವೇಣುಗೋಪಾಲ್ ಅವರಿಗೆ ಅರ್ಹತೆ ಇಲ್ಲದಿದ್ದರೂ ಪ್ರೊಫೆಸರ್ ಹುದ್ದೆಗೆ ಪದೋನ್ನತಿ ಮಾಡಲಾಗಿದೆ. ಹಾಗೆ ಆಯ್ಕೆಯಾಗುವ ಸಂದರ್ಭದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದು, ಹಲವು ಅಕ್ರಮಗಳ ಆರೋಪ ಕೂಡ ಇವರ ಮೇಲಿದೆ. ಹೀಗಾಗಿ ಇವರ ಆಯ್ಕೆ ಸರಿಯಲ್ಲ ಎಂದು ವಾದ ಮಂಡಿಸಿದ್ರು. ವಕೀಲರ ವಾದ ಆಲಿಸಿದ ನ್ಯಾಯಾಲಯವು ಕುಲಪತಿ ನೇಮಕವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ABOUT THE AUTHOR

...view details