ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿರುವ ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದೆ .
ಕೆ.ಆರ್.ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆ ತೆರವಿಗೆ ಹೈಕೋರ್ಟ್ ಆದೇಶ - illegal shops in kr market news
ಸಾರ್ವಜನಿಕರ ಹಿತದೃಷ್ಟಿಯಿಂದ ಕೆ.ಆರ್.ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಆದೇಶ ನೀಡಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಕೆ.ಆರ್.ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಆದೇಶ ನೀಡಿದೆ. ಮಾರುಕಟ್ಟೆಯಲ್ಲಿ ತಲೆಯೆತ್ತಿರುವ ಅಕ್ರಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈಗಾಗಲೇ ಒಂದು 1200 ಕ್ಕೂ ಹೆಚ್ಚು ಅಂಗಡಿಗಳು ಕೆ.ಆರ್.ಮಾರುಕಟ್ಟೆಯಲ್ಲಿದ್ದು, ಇದಕ್ಕಿಂತ ಹೆಚ್ಚು ಮಳಿಗೆಗಳ ಸ್ಥಾಪನೆಗೆ ಅವಕಾಶ ನೀಡಬಾರದು. ಅತಿ ಹೆಚ್ಚು ಜನ ಸೇರುವ ಜಾಗ ಇದಾಗಿದ್ದು, ಯಾವುದೇ ರೀತಿಯ ಅಗ್ನಿ ಅವಘಡಗಳು ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ರೀತಿಯ ಕ್ರಮ ಅನಿವಾರ್ಯ ಎಂದು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.