ಬೆಂಗಳೂರು: ಗಂಗೇನಹಳ್ಳಿ ಬಳಿಯ 1.11 ಎಕರೆ ಜಮೀನಿಗೆ ಸಂಬಂಧಿಸಿದ ಡಿನೊಟೀಫೀಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿನೋಟಿಫಿಕೇಷನ್ ಪ್ರಕರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ - High Court order to continue Lokayukta probe against CM
![ಡಿನೋಟಿಫಿಕೇಷನ್ ಪ್ರಕರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ](https://etvbharatimages.akamaized.net/etvbharat/prod-images/768-512-10125500-thumbnail-3x2-deeed.jpg)
14:09 January 05
ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ
ಬಿಎಸ್ವೈ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ ನೀಡಿದೆ. ಕಲಬುರಗಿ ನ್ಯಾಯಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಈ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಕಾಲು ಹಿಡಿಯುತ್ತಿವೆ: ಹೆಚ್ಡಿಕೆ ವ್ಯಂಗ್ಯ
ಜತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 25,000 ರೂಪಾಯಿ ದಂಡ ಕೂಡ ವಿಧಿಸಲಾಗಿದೆ. ಲೋಕಾಯುಕ್ತ ಪೊಲೀಸರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
2015ರಲ್ಲಿ ಜಯಕುಮಾರ್ ಹಿರೇಮಠ ದೂರು ನೀಡಿದ್ದರು. ಪ್ರಕರಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಎರಡನೇ ಆರೋಪಿ ಆಗಿದ್ದರು. ಕುಮಾರಸ್ವಾಮಿ ಕುಟುಂಬದ ವಿರುದ್ಧದ ಡಿನೋಟಿಫಿಕೇಷನ್ ಆರೋಪ ಇದಾಗಿತ್ತು.