ಬೆಂಗಳೂರು :ಕೋವಿಡ್-19 ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಪೂರಕವಾಗಿ ಸೂಕ್ತ ಆರೋಗ್ಯ ಯೋಜನೆ ರೂಪಿಸುವಂತೆ ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಿದೆ.
ಹಿರಿಯ ನಾಗರಿಕರಿಗೆ ವೈದ್ಯಕೀಯ ನೆರವು ನೀಡಲು ಯೋಜನೆ ರೂಪಿಸುವಂತೆ ಹೈಕೋರ್ಟ್ ಸೂಚನೆ - High court order to create a health scheme for senior citizens
ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ವೈದ್ಯಕೀಯ ವಿಮೆ ನೀಡುವಂತೆ ಆದೇಶಿಸುವುದು ಸಾಧ್ಯವಿಲ್ಲ. ಆದರೆ, ಆರೋಗ್ಯಯುತವಾಗಿ ಜೀವಿಸುವುದು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರಗಳು ಹಿರಿಯ ನಾಗರಿಕರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವ ನಿಟ್ಟಿನಲ್ಲಿ ಸೂಕ್ತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ವಿಮೆ ನೀಡಲು ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ವೈದ್ಯಕೀಯ ವಿಮೆ ನೀಡುವಂತೆ ಆದೇಶಿಸುವುದು ಸಾಧ್ಯವಿಲ್ಲ. ಆದರೆ, ಆರೋಗ್ಯಯುತವಾಗಿ ಜೀವಿಸುವುದು ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರಗಳು ಹಿರಿಯ ನಾಗರಿಕರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವ ನಿಟ್ಟಿನಲ್ಲಿ ಸೂಕ್ತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ದೇಶಿಸಿದೆ.
ಅರ್ಜಿದಾರರ ಕೋರಿಕೆ :ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೃದ್ಧರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಸೇರಿದಂತೆ ಯಾವುದೇ ವಿಮೆಗೆ ಒಳಪಡುವುದಿಲ್ಲ. ಹೀಗಾಗಿ ಆರ್ಥಿಕವಾಗಿ ದುರ್ಬಲವಿರುವ ಹಿರಿಯ ನಾಗರಿಕರಿಗೆ ಚಿಕಿತ್ಸೆ ಪಡೆಯಲು ಕಷ್ಟವಾಗುತ್ತಿದೆ. ಇನ್ನು ವಿಮಾ ಸಂಸ್ಥೆಗಳು ಹಿರಿಯ ನಾಗರಿಕರಿಗೆ ಹೆಚ್ಚಿನ ಪ್ರೀಮಿಯಂ ಮೊತ್ತ ಕೇಳುತ್ತವೆ. ಆದ್ದರಿಂದ ಹಿರಿಯ ನಾಗರಿಕರ ರಕ್ಷಣೆ ದೃಷ್ಟಿಯಿಂದ ಉಚಿತವಾಗಿ ಇಲ್ಲವೇ ರಿಯಾಯಿತಿ ದರದಲ್ಲಿ ಆರೋಗ್ಯ ವಿಮೆ ಒದಗಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.