ಬೆಂಗಳೂರು:ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15ರಿಂದ ಬಿಸಿಯೂಟ ನೀಡುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವಂತೆ ನಿರ್ದೇಶನ ಕೋರಿ ನಗರದ ಎಂ. ರಾಧಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ.
ಈಗಾಗಲೇ ಶಾಲೆಗಳನ್ನು ಆರಂಭಿಸಿರುವುದರಿಂದ ಕೊರೊನಾ ಸೋಂಕಿನ ಕಾರಣ ಹೇಳಿ ಬಿಸಿಯೂಟ ತಪ್ಪಿಸುವುದು ಸಮರ್ಥನೀಯವಲ್ಲ. ಆದ್ದರಿಂದ ಶಾಲೆಗೆ ಬರುತ್ತಿರುವ ಮಕ್ಕಳಿಗೆ ಏಪ್ರಿಲ್ 15ರಿಂದ ಬಿಸಿಯೂಟ ನೀಡುವ ಕುರಿತು ಏ.8ರ ಒಳಗೆ ಸರಿಯಾದ ನಿರ್ಧಾರ ಕೈಗೊಂಡು ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.