ಬೆಂಗಳೂರು:ಬಾರ್ಗಳ ಶಬ್ದಮಾಲಿನ್ಯ ಅಳೆಯಲು ತೆಗೆದುಕೊಂಡಿರುವ ಕ್ರಮದ ಕುರಿತು ಪೊಲೀಸರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಸ್ತುಸ್ಥಿತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಡಿಫೆನ್ಸ್ ಕಾಲೋನಿ ನಿವಾಸಿಗಳ ಸಂಘದ 20 ಜನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಬಾರ್ಗಳ ಶಬ್ದ ಮಾಲಿನ್ಯದ ಬಗ್ಗೆ ಸಾರ್ವಜನಿಕರು ಪೊಲೀಸ್ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ದೂರು ನೀಡುವ ವ್ಯವಸ್ಥೆ ಮಾಡಿ, ದೂರುದಾರರ ಗುರುತು ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಗೌಪ್ಯವಾಗಿಡಿ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಬ್ದ ಮಾಪನ ಉಪಕರಣಗಳು ಇರುವಂತೆ ನೋಡಿಕೊಂಡು, ಪೊಲೀಸ್ ಠಾಣೆಯಲ್ಲಿ ಶಬ್ದ ಮಾಲಿನ್ಯ ಅಳೆಯಲು ಸೂಕ್ತ ಮಾಪಕಗಳಿವೆಯೇ ಎಂದು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆಹೈಕೋರ್ಟ್ಸೂಚಿಸಿದೆ.
ಇಂದಿರಾನಗರದಲ್ಲಿ ಪಬ್ ಮತ್ತು ಬಾರ್‌ಗಳಿಂದ ಶಬ್ಧ ಮಾಲಿನ್ಯ ಉಂಟಾಗುತ್ತಿದೆ ಎಂದು ಕೆಲ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ವಿಚಾರಣೆ ವೇಳೆ ಬಾರ್ಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹೀಗಾಗಿ ಬಾರ್ಗಳ ಕುರಿತು ವರದಿ ನೀಡಲಾಗಿದೆ