ಬೆಂಗಳೂರು:ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ನ್ನು ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಅಮೈಕಸ್ ಕ್ಯೂರಿ ಸಲ್ಲಿಸಿರುವ ಶಿಫಾರಸುಗಳನ್ನು ಜಾರಿಗೊಳಿಸಲು ಸಂಬಂಧ ಉನ್ನತಾಧಿಕಾರ ಸಮಿತಿ ಸಭೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ರಾಜ್ಯದಲ್ಲಿ ಸಮರ್ಥವಾಗಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅಗತ್ಯ ನೆರವು ನೀಡಲು ನಿಯೋಜನೆಗೊಂಡಿರುವ ಅಮೈಕಸ್ ಕ್ಯೂರಿ ಆದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದ ಮಂಡಿಸಿ, ಖಾಲಿಯಿರುವ ಶೈಕ್ಷಣಿಕ ಸಮನ್ವಯಕಾರರ ಹುದ್ದೆಗಳನ್ನು ಒಂದು ತಿಂಗಳ ಅವಧಿಯಲ್ಲಿ ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.