ವಾಹನಗಳ ಅನಧಿಕೃತ ನಂಬರ್ ಪ್ಲೇಟ್ ತೆಗೆದು ಹಾಕಲು ಹೈಕೋರ್ಟ್ ನಿರ್ದೇಶನ.. - ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಸರ್ಕಾರಿ ಸಂಸ್ಥೆಗಳ ಹೆಸರುಗಳನ್ನು ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಬಳಸುತ್ತಿದ್ದಾರೆ ಹಾಗೂ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಂತಹ ನಂಬರ್ ಪ್ಲೇಟ್‌ಗಳನ್ನು ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಮಾಧ್ಯಮಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಬೆಂಗಳೂರು: ಸರ್ಕಾರಿ ಸಂಸ್ಥೆಗಳ ಹೆಸರುಗಳನ್ನು ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಬಳಸುತ್ತಿದ್ದಾರೆ ಹಾಗೂ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಂತಹ ನಂಬರ್ ಪ್ಲೇಟ್‌ಗಳನ್ನು ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಮಾಧ್ಯಮಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಮಾನವ ಹಕ್ಕುಗಳ ಆಯೋಗದ ಹೆಸರುಗಳ ದುರುಪಯೋಗದ ವಿರುದ್ಧ ಸ್ಥಳೀಯ ಪೊಲೀಸರು ದಾಖಲಿಸಿದ್ದ ಪ್ರಕರಣ ಪ್ರಶ್ನಿಸಿ ಮಂಗಳೂರಿನ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.
ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಇಂತಹ ಹೆಸರುಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ, ಅನಧಿಕೃತವಾಗಿ ವಾಹನಗಳ ಮೇಲೆ ಹಾಕಿರುವ ಹೆಸರುಗಳನ್ನು ತೆಗೆದುಹಾಕುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ, ಮಾಧ್ಯಮಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ನ್ಯಾಯಪೀಠವು ನಿರ್ದೇಶನ ನೀಡಿ, ಅರ್ಜಿ ವಿಚಾರಣೆಯನ್ನು ಡಿ.18ಕ್ಕೆ ಮುಂದೂಡಿದೆ.