ಬೆಂಗಳೂರು:ಲಾಕ್ಡೌನ್ ನಿಯಮ ಉಲ್ಲಂಘಿಸಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ವಿಚಾರಣೆ ವೇಳೆ ಪ್ರಕರಣದ ಕುರಿತು ಬೇಸರ ವ್ಯಕ್ತಪಡಿಸಿದ ಪೀಠ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂದರೆ ಯಾರಿಗೂ ಇಲ್ಲ ಎಂದೇ ಅರ್ಥ. ಅಂತಹದ್ದರಲ್ಲಿ ರಾಜಕಾರಣಿಗಳು ಹೇಗೆ ಭೇಟಿ ನೀಡಲು ಸಾಧ್ಯ. ರಾಜಕಾರಣಿಗಳಿಗೆ ಇತರರಿಗಿಂತ ಹೆಚ್ಚು ಹೊಣೆಗಾರಿಕೆಯಿರುತ್ತದೆ. ಈ ಪ್ರಕರಣ ಸಂಬಂಧಪಟ್ಟ ಎಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು.
ಹೀಗಾಗಿ ನಿರ್ಬಂಧ ಮೀರಿ ದೇವವಸ್ಥಾನ ಪ್ರವೇಶಿಸಿದವರ ವಿರುದ್ಧ ವಿಪ್ತತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಮುಜರಾಯಿ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.