ಕರ್ನಾಟಕ

karnataka

ETV Bharat / state

ಚಾಮರಾಜನಗರ ದುರ್ಘಟನೆ ನ್ಯಾಯಾಂಗ ತನಿಖೆಗೆ : ಸರ್ಕಾರದ ಸ್ಪಷ್ಟನೆ ಕೇಳಿದ ಹೈಕೋರ್ಟ್ - High Court outrage against Center

high-court-outrage-against-central-govt
ಹೈಕೋರ್ಟ್

By

Published : May 4, 2021, 3:33 PM IST

Updated : May 4, 2021, 7:24 PM IST

14:58 May 04

ಕೇಂದ್ರದ ವಿರುದ್ಧ ಹೈಕೋರ್ಟ್ ಆಕ್ರೋಶ

ಬೆಂಗಳೂರು: ಮೇ 2ರ ರಾತ್ರಿ ಚಾಮರಾಜನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಲಭ್ಯವಾಗದೇ 24 ಕೋವಿಡ್ ಸೋಂಕಿತ ರೋಗಿಗಳು ಸಾವನ್ನಪ್ಪಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಕೋವಿಡ್ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 24 ಕೋವಿಡ್ ಸೋಂಕಿತ ರೋಗಿಗಳು ಮೇ 2ರ ರಾತ್ರಿ ಸಾವನ್ನಪ್ಪಿದ ಘಟನೆ ಬಗ್ಗೆ ಮಾಧ್ಯಮಗಳ ವರದಿ ಪ್ರಸ್ತಾಪಿಸಿದ ಪೀಠ ತೀವ್ರ ಕಳವಳ ವ್ಯಕ್ತಪಡಿಸಿತು. ಜತೆಗೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಅದಕ್ಕೆ ಕಾರಣಗಳು ಏನೆಂದು ಅಡ್ವೊಕೇಟ್ ಜನರಲ್ ಅವರಿಗೆ ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ಎಜಿ ಪ್ರಭುಲಿಂಗ ನಾವದಗಿ ರೋಗಿಗಗಳು ಸಾವನ್ನಪ್ಪಿರುವುದು ನಿಜ. ಆದರೆ, ಆ್ಯಕ್ಸಿಜನ್ ಕೊರತೆಯಿಂದಲೇ ರೋಗಿಗಳು ಸಾವನ್ನಪ್ಪಿದರಾ ಎಂಬ ಬಗ್ಗೆ ನಿಖರವಾಗಿ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ದುರ್ಘಟನೆಗೆ ಕಾರಣಗಳು ಏನೆಂದು ತಿಳಿಯಲು ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ. ಬುಧವಾರ ಸಂಜೆಯೊಳಗೆ ಈ ಬಗ್ಗೆ ವರದಿ ಸಿಗುವ ನಿರೀಕ್ಷೆ ಇದೆ. ಘಟನೆಗೆ ಯಾರೇ ಕಾರಣರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

ವಾದ ಆಲಿಸಿದ ಪೀಠ, ರೋಗಿಗಳು ಆ್ಯಕ್ಸಿಜನ್ ಇಲ್ಲದೇ ಸಾವನ್ನಪ್ಪಿರುವುದು ಅತ್ಯಂತ ಘೋರ ವಿಚಾರ. ಹಾಗೆಯೇ ನ್ಯಾಯಾಂಗ ತನಿಖೆಗೆ ಒಪ್ಪಿಸುವುದಕ್ಕೆ ಅರ್ಹ ಪ್ರಕರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಬೇಕು ಮತ್ತು ಘಟನೆಯ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ಆ್ಯಕ್ಸಿಜನ್​ ಕೊರತೆಯಾಗದಂತೆ ನೆರೆಹೊರೆ ಜಿಲ್ಲೆಗಳಲ್ಲಿ ಸಮನ್ವಯ ಸಾಧಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಓದಿ:ಕೋವಿಡ್ ಉಲ್ಬಣ ಹಿನ್ನೆಲೆ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

Last Updated : May 4, 2021, 7:24 PM IST

ABOUT THE AUTHOR

...view details