ಕರ್ನಾಟಕ

karnataka

ETV Bharat / state

ಸಂಪತ್ ರಾಜ್​ಗೆ ಸದ್ಯಕ್ಕಿಲ್ಲ ಜಾಮೀನು: ಜನವರಿಗೆ ವಿಚಾರಣೆ ಮುಂದೂಡಿದ ಹೈಕೋರ್ಟ್ - ಹೈಕೋರ್ಟ್

ಸಂಪತ್ ರಾಜ್​ಗೆ ಸದ್ಯಕ್ಕಿಲ್ಲ ಜಾಮೀನು
ಸಂಪತ್ ರಾಜ್​ಗೆ ಸದ್ಯಕ್ಕಿಲ್ಲ ಜಾಮೀನು

By

Published : Dec 21, 2020, 4:25 PM IST

Updated : Dec 21, 2020, 5:13 PM IST

16:19 December 21

ಮಾಜಿ ಮೇಯರ್​ ಸಂಪತ್​ ರಾಜ್​ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಹೈಕೋರ್ಟ್​, ಇದನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದರಿಂದ ಸಂಪತ್​ ರಾಜ್​ ಈ ವರ್ಷವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ.

ಬೆಂಗಳೂರು:ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್​​ ಸಂಪತ್ ರಾಜ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್, ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂಪತ್ ರಾಜ್ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತು.

ಓದಿ: ಜಾಮೀನು ಕೋರಿ ಸಂಪತ್ ರಾಜ್ ಅರ್ಜಿ: ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಹೈಕೋರ್ಟ್ ನೋಟಿಸ್

ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ಸಂಪತ್ ರಾಜ್ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ, ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸಂಪತ್ ರಾಜ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Last Updated : Dec 21, 2020, 5:13 PM IST

ABOUT THE AUTHOR

...view details