ಕರ್ನಾಟಕ

karnataka

ETV Bharat / state

ಜಿ.ಪಂ-ತಾ.ಪಂ ಚುನಾವಣೆ ಅರ್ಜಿ: ಮೇ 23ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟ್‌ ಮುಂದೆ ಅಳಲು

ಪಂಚಾಯತ್ ರಾಜ್ ಸೀಮಾನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ಎಸ್.ಜಿ ಪಂಡಿತ್ ಮತ್ತು ನ್ಯಾ.ಎಂ.ಜಿ.ಉಮಾ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

high-court-postpones-hearing-on-zp-elections-to-may-23
ಜಿ.ಪಂ-ತಾಪಂ ಚುನಾವಣೆ ಅರ್ಜಿ: ಮೇ 23ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

By

Published : May 18, 2022, 7:56 AM IST

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಅವಧಿ ಮುಗಿದಿರುವ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಳಲು ತೋಡಿಕೊಂಡಿದೆ.

ಪಂಚಾಯತ್ ರಾಜ್ ಸೀಮಾನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ಎಸ್.ಜಿ ಪಂಡಿತ್ ಮತ್ತು ನ್ಯಾ. ಎಂ.ಜಿ ಉಮಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಪೀಠ, ತಾ.ಪಂ ಮತ್ತು ಜಿ.ಪಂ ಚುನಾವಣೆಗಳನ್ನು ತಕ್ಷಣವೇ ನಡೆಸುವಂತೆ ಕಳೆದ ವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದರಂತೆ ಆಯೋಗ ಚುನಾವಣೆಗಳನ್ನು ನಡೆಸಲು ಬದಲು ಬಾಕಿ ಇರುವ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಆಯೋಗ ಮನವಿ (ಮೆಮೋ) ಸಲ್ಲಿಸಿರುವುದೇಕೆ ಎಂದು ಪ್ರಶ್ನಿಸಿತು.

ಚುನಾವಣಾ ಆಯೋಗದ ಪರ ವಕೀಲರು ವಿವರಣೆ ನೀಡಿ, ಕ್ಷೇತ್ರ ಪುರನ್ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ರಚಿಸುವ ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇವುಗಳಿಲ್ಲದೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ಈ ಕುರಿತಂತೆ ವಿವರವಾಹಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮೇ.23ಕ್ಕೆ ಮುಂದೂಡಿತು.

ಇದನ್ನೂ ಓದಿ:12ನೇ ಬಾರಿ ಮರಣದಂಡನೆಗೀಡಾದ ಸುರೇಂದ್ರ ಕೋಲಿ ಮತ್ತೊಂದು ಕೇಸಲ್ಲಿ ದೋಷಿ

ABOUT THE AUTHOR

...view details