ಕರ್ನಾಟಕ

karnataka

ETV Bharat / state

ಕೆಆರ್​​​​ಎಸ್ ಸುತ್ತ ಗಣಿಗಾರಿಕೆ ನಿಲ್ಲಿಸಿದ್ದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್ - ಕೆಆರ್​​​​ಎಸ್ ಸುತ್ತ ಗಣಿಗಾರಿಕೆ ನಡೆಸದಂತೆ ಡಿಸಿ ಆದೇಶ ವಿಚಾರ

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸುತ್ತಮುತ್ತಲಿನ ಕಲ್ಲು ಗಣಿಗಾರಿಕೆ ಘಟಕಗಳ ಪರವಾನಗಿಯನ್ನು ನಿಲ್ಲಿಸಿರುವ ಆದೇಶವನ್ನು ಹೈಕೋರ್ಟ್​ ರದ್ದು ಮಾಡಿದೆ.

High Court
ಹೈಕೋರ್ಟ್

By

Published : Sep 16, 2021, 10:50 PM IST

ಬೆಂಗಳೂರು:ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಸುತ್ತಮುತ್ತಲಿನ 28 ಕಲ್ಲು ಗಣಿಗಾರಿಕೆ ಘಟಕಗಳ ಪರವಾನಗಿಯನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಕಲ್ಲು ಗಣಿ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ಲಕ್ಷ್ಮೀ ವೆಂಕಟೇಶ್ವರ ಕಲ್ಲು ಗಣಿಗಾರಿಕೆ ಘಟಕ ಸೇರಿದಂತೆ 28 ಘಟಕಗಳ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

ಕಲ್ಲು ಗಣಿಗಾರಿಕೆ ಘಟಕಗಳಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದಪಡಿಸುವ ಮುನ್ನ ಮಂಡ್ಯ ಜಿಲ್ಲಾಧಿಕಾರಿ ಕಾನೂನು ಪ್ರಕ್ರಿಯೆ ಪಾಲಿಸಿಲ್ಲ. ಘಟಕಗಳ ಮಾಲೀಕರ ಅಹವಾಲು ಆಲಿಸಿಲ್ಲ. ಇದರಿಂದ ಜಿಲ್ಲಾಧಿಕಾರಿಯ ಆದೇಶ ರದ್ದು ಪಡಿಸಲಾಗುತ್ತಿದೆ. ಆದರೆ ಮತ್ತೆ ಕಲ್ಲು ಗಣಿಗಾರಿಕೆ ಘಟಕಗಳ ಮಾಲೀಕರಿಗೆ ಜಿಲ್ಲಾಧಿಕಾರಿ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ, ಅಹವಾಲು ಆಲಿಸಿದ ನಂತರ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳಬಹುದು ಎಂದು ಪೀಠ ತಿಳಿಸಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆಗೆ ನೀಡಿದ್ದ ಪರವಾನಗಿಗಳನ್ನು ರದ್ದುಪಡಿಸಿ ಮಂಡ್ಯ ಜಿಲ್ಲಾಧಿಕಾರಿ ಕಳೆದ ಜು.31ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಘಟಕಗಳ ಮಾಲಿಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಲೈಸೆನ್ಸ್ ರದ್ದುಪಡಿಸುವ ಮುನ್ನ ಕಲ್ಲು ಗಣಿಗಾರಿಕೆ ಘಟಕಗಳಿಗೆ ನೋಟಿಸ್ ನೀಡಿಲ್ಲ ಮತ್ತು ಘಟಕಗಳ ಮಾಲೀಕರ ವಾದ ಆಲಿಸಿಲ್ಲ ಎಂದು ಅರ್ಜಿದಾರರು ದೂರಿದ್ದರು.

ಇದನ್ನೂ ಓದಿ: ಹೃದಯಾಘಾತದಿಂದ ನಿಧನರಾದ ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಆತ್ಮಹತ್ಯೆಗೆ ಶರಣಾದ ಪುತ್ರ

ABOUT THE AUTHOR

...view details