ಬೆಂಗಳೂರು :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿರುವ ತೀರ್ಪನ್ನು ಹೈಕೋರ್ಟ್ ನಾಳೆ ಮಧ್ಯಾಹ್ನ ಪ್ರಕಟಿಸಲಿದೆ.
ಅವಧಿ ಮುಗಿದಿರುವ ಬಿಬಿಎಂಪಿಗೆ ಶೀಘ್ರವಾಗಿ ಚುನಾವಣೆ ನಡೆಸುವಂತೆ ಕೋರಿ ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಎಂ. ಶಿವರಾಜು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ನವೆಂಬರ್ 25ರಂದು ಪ್ರಕ್ರಿಯೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿತ್ತು.