ಕರ್ನಾಟಕ

karnataka

ETV Bharat / state

ಕುಡಿಯುವ ನೀರಿನ ಯೋಜನೆ ಹಣ ನಕಲಿ ಬ್ಯಾಂಕ್ ಖಾತೆಗಳಿಗೆ ರವಾನೆ ಕೇಸ್‌; ತನಿಖೆಗೆ ಹೈಕೋರ್ಟ್ ತಡೆ

ರಾಜ್ಯ ಜಲ ಮತ್ತು ನೈರ್ಮಲ್ಯ ಮಿಷನ್ ಯೋಜನೆಯಡಿ ಮಂಜೂರಾದ ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಸರ್ಕಾರಕ್ಕೆ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಎಸಗಿರುವ ಆರೋಪದಡಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಮತ್ತಿತರರ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಜೊತೆಗೆ, ದೂರುದಾರರಿಗೆ ನೋಟೀಸ್ ಜಾರಿ ಮಾಡಿದೆ.

the-high-court-has-blocked-a-special-court-s-probe-against-the-officers-in-drinking-water-project-case
ಕುಡಿಯುವ ನೀರಿನ ಯೋಜನೆ ಹಣ ನಕಲಿ ಬ್ಯಾಂಕ್ ಖಾತೆಗಳಿಗೆ ರವಾನೆ ಆರೋಪ: ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್

By

Published : May 31, 2022, 7:30 AM IST

ಬೆಂಗಳೂರು: ಕುಡಿಯುವ ನೀರು ಯೋಜನೆಯಡಿ ಮಂಜೂರಾದ ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಎಸಗಿರುವ ಆರೋಪದಡಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಮತ್ತಿತರರ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ವಿಶೇಷ ನ್ಯಾಯಾಲಯದ(ಎಸಿಬಿ) ತನಿಖೆ ಆದೇಶ ರದ್ದುಪಡಿಸುವಂತೆ ಕೋರಿ ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಪ್ರಸಾದ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿದಾರರ ವಿರುದ್ಧದ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೇ, ಪ್ರತಿವಾದಿಗಳಾದ ಹಲಸೂರು ಗೇಟ್ ಠಾಣೆ ಪೊಲೀಸರು, ಎಸಿಬಿ ಮತ್ತು ಖಾಸಗಿ ದೂರುದಾರ ಎಸ್.ನಾರಾಯಣಸ್ವಾಮಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.

2011ರಿಂದ 2015ರ ನಡುವೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಹಾಗೂ ರಾಜ್ಯ ಜಲ ಮತ್ತು ನೈರ್ಮಲ್ಯ ಮಿಷನ್ ಯೋಜನೆಯಡಿ ಮಂಜೂರಾಗಿದ್ದ ಹಣವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಪ್ರಸಾದ್, ಟಿ.ಎಂ.ವಿಜಯಭಾಸ್ಕರ್, ಡಾ.ಇ.ವಿ ರಮಣರೆಡ್ಡಿ ದುರುಪಯೋಗ ಪಡಿಸಿಕೊಂಡಿದ್ದಾರೆ. ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಸ್.ನಾರಾಯಣ ಸ್ವಾಮಿ ಎಸಿಬಿ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 2022ರ ಏ.18ರಂದು ತನಿಖೆ ನಡೆಸಿ 4 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಎಸಿಬಿ ತನಿಖಾಧಿಕಾರಿಗಳಿಗೆ ನಿರ್ದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಶಕ್ತಿಶಾಲಿಗಳು, ಗೆದ್ದವರ ವಿರುದ್ಧ ದೂಷಣೆ ಮಾಡುವುದು ಸ್ವಾಭಾವಿಕ: ಕೆ.ಎಸ್. ಈಶ್ವರಪ್ಪ

For All Latest Updates

TAGGED:

ABOUT THE AUTHOR

...view details