ಕರ್ನಾಟಕ

karnataka

ETV Bharat / state

ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ ಎತ್ತಿಹಿಡಿದ ಹೈಕೋರ್ಟ್ - ownership of land act

ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್
ಹೈಕೋರ್ಟ್

By

Published : May 22, 2023, 9:22 PM IST

ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡದ ಗೇಣಿದಾರರಿಗೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಉಡುಪಿಯ ಅದಮಾರು ಮಠ, ಗಣೇಶ್ ಪೈ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗಿಯ ಪೀಠ ಸುದೀರ್ಘ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಸೋಮವಾರ ಆದೇಶವನ್ನು ಪ್ರಕಟಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಯೋಗ್ಯ ಬೆಲೆ ಪಾವತಿಸಿ ಜಮೀನು ವಶಪಡಿಸಿಕೊಳ್ಳುವುದಕ್ಕೆ ವಿರುದ್ಧವಾಗಿ ಕನಿಷ್ಠ ಬೆಲೆ ಪಾವತಿಸುವ ಮೂಲಕ ಭೂಮಿ ವಶಕ್ಕೆ ಪಡೆಯುತ್ತಿರುವುದು ಸಂವಿಧಾನ ಬಾಹಿರ. ಇದರಿಂದ ಮೂಲಗಾರರು ಅಥವಾ ಭೂ ಮಾಲೀಕರರಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡಿದಂತಾಗಲಿದೆ ಎಂದು ವಾದ ಮಂಡಿಸಿದ್ದರು.

ಗೇಣಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಬಿ ವಿ ಆಚಾರ್ಯ ಮತ್ತು ಎ ಜಿ ಹೊಳ್ಳ, ಮೂಲಗೇಣಿದಾರರು ತಲೆ ತಲಾಂತರಗಳಿಂದ ಭೂಮಿಯನ್ನು ಉಳುಮೆ ಮಾಡುತ್ತಾ ಬಂದಿದ್ದು, ಅವರಿಗೆ ಭೂಮಿಯ ಹಕ್ಕು ನೀಡುವುದು ನ್ಯಾಯ ಯೋಚಿತ. ಈ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಕಾಯಿದೆ ಸಿಂಧುವಾಗಿದೆ. ಹೀಗಾಗಿ ಕಾಯಿದೆಯನ್ನು ಎತ್ತಿಹಿಡಿಯಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ರಾಜ್ಯ ಸರ್ಕಾರದ ಪರವಾಗಿ ವಿಶೇಷ ವಕೀಲ ಬಿ ಎಲ್ ಆಚಾರ್ಯ ವಾದ ಮಂಡಿಸಿದ್ದರು.

ಇದನ್ನೂ ಓದಿ:ಖಾಸಗಿ ಕಂಪನಿಗಳು ಹಾಗೂ ಹೆಚ್​ಎಎಲ್​ನಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡದಿದ್ದರೆ ಲೈಸೆನ್ಸ್ ರದ್ದು: ಸಚಿವ ಪರಮೇಶ್ವರ್

ಪ್ರಕರಣದ ಹಿನ್ನೆಲೆ ಏನು ?ಸ್ವಾತಂತ್ರ್ಯ ಪೂರ್ವ(ಬ್ರಿಟಿಷರ) ಕಾಲದಲ್ಲಿ ಭೂ ಕಂದಾಯ ವಸೂಲಿ ಮಾಡುವ ಅಧಿಕಾರವನ್ನು ಸ್ಥಳೀಯವಾಗಿ ಶ್ರೀಮಂತರು, ಮಠ, ಮಂದಿರ, ಮಸೀದಿ ಮತ್ತು ಚರ್ಚುಗಳಿಗೆ ನೀಡಲಾಗಿತ್ತು. ದಿನ ಕಳೆದಂತೆ ಕಂದಾಯ ವಸೂಲಿ ಮಾಡಿ, ಮೇಲುಸ್ತುವಾರಿ ನೋಡಿಕೊಳ್ಳುವವರು ಮೂಲದಾರರು/ಭೂ ಮಾಲೀಕರು ಎನಿಸಿಕೊಂಡಿದ್ದರು. ಕಾಲಾನಂತರದಲ್ಲಿ ಇದೇ ಭೂಮಿಯನ್ನು ತಲೆ ತಲಾಂತರಗಳಿಂದ ವಾಸ್ತವಿಕವಾಗಿ ಅನುಭವಿಸಿಕೊಂಡು ಬಂದವರು ಮೂಲಗೇಣಿದಾರರು ಎಂದು ಭೂಮಿಯ ಪ್ರಮಾಣ ಪತ್ರದಲ್ಲಿ ನಮೂದಿಸಲಾಗಿತ್ತು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್​

ಭೂಮಿ ಸ್ವಾಧೀನದಲ್ಲಿದ್ದರೂ ಒಡೆತನವಿಲ್ಲದ ಕಾರಣ ಜಾಗವನ್ನು ಅಭಿವೃದ್ಧಿಪಡಿಸುವುದು ಅವರಿಗೆ ಕಷ್ಟವಾಗಿತ್ತು. ಬ್ಯಾಂಕ್​​ಗಳಿಂದ ಸಾಲ-ಸೌಲಭ್ಯ ದೊರೆಯುತ್ತಿರಲಿಲ್ಲ. ಹೀಗಾಗಿ, ಅದನ್ನು ಮಾರಾಟ ಮಾಡುವ ಹಕ್ಕೂ ಮೂಲ ಗೇಣಿದಾರರಿಗೆ ಇಲ್ಲವಾಗಿತ್ತು. ಸಾಕಷ್ಟು ಹೋರಾಟದ ಬಳಿಕ ಮೂಲ ಗೇಣಿದಾರರಿಗೆ ಜಮೀನಿನ ಪೂರ್ಣ ಮಾಲೀಕತ್ವ ಮತ್ತು ಮೂಲದಾರರಿಗೆ ನ್ಯಾಯಯುತ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ ಕಾಯಿದೆ ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ಈಗ ನ್ಯಾಯಾಲಯ ವಜಾ ಮಾಡಿದೆ.

ಇದನ್ನೂ ಓದಿ: ಹಿಂದಿನ ಸರ್ಕಾರ ಅವಧಿಯ ನಿಗಮ ಮಂಡಳಿಯ ಎಲ್ಲ ನಾಮನಿರ್ದೇಶನ, ಕಾಮಗಾರಿ, ಹಣ ಬಿಡುಗಡೆಗೆ ತಡೆ

ABOUT THE AUTHOR

...view details