ಕರ್ನಾಟಕ

karnataka

By

Published : Mar 17, 2020, 4:06 PM IST

ETV Bharat / state

ನಕಲಿ ವೋಟರ್ ಐಡಿ ಪತ್ತೆ ಪ್ರಕರಣ: ಅನರ್ಹ ಶಾಸಕ ಮುನಿರತ್ನ, ಸಿಬಿಐಗೆ ಹೈಕೋರ್ಟ್ ನೊಟೀಸ್​

ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಆರ್​ಆರ್ ನಗರ ವಿಧಾಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನರ್ಹ ಶಾಸಕ ಮುನಿರತ್ನ ಮತ್ತು ಸಿಬಿಐಗೆ ಹೈಕೋರ್ಟ್​ ನೊಟೀಸ್​ ಜಾರಿ ಮಾಡಿದೆ.

ನಕಲಿ ವೋಟರ್ ಐಡಿ ಪತ್ತೆ ಪ್ರಕರಣ
ನಕಲಿ ವೋಟರ್ ಐಡಿ ಪತ್ತೆ ಪ್ರಕರಣ

ಬೆಂಗಳೂರು: ಆರ್ ​ಆರ್ ನಗರ ವಿಧಾಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಅನರ್ಹ ಶಾಸಕ ಮುನಿರತ್ನ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಗರದ ಜಾಲಹಳ್ಳಿಯ ಅಪಾರ್ಟ್​ಮೆಂಟ್​ವೊಂದರಲ್ಲಿ ದೊರೆತ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಠಾಣೆ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಗೊಲ್ಲಹಳ್ಳಿ ನಿವಾಸಿ ಆನಂದ್ ಕುಮಾರ್ ಹಾಗೂ ಕೊತ್ತನೂರು ನಿವಾಸಿ ಸಂತೋಷ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

ಕೆಲ ಕಾಲ ಅರ್ಜಿದಾರ ಪರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು, ಜಾಲಹಳ್ಳಿ ಇನ್​ಸ್ಪೆಕ್ಟರ್, ಅನರ್ಹ ಶಾಸಕ ಮುನಿರತ್ನ ಹಾಗೂ ಸಿಬಿಐಗೆ ನೊಟೀಸ್ ಜಾರಿ ಮಾಡಲು ಆದೇಶಿಸಿ, ವಿಚಾರಣೆಯನ್ನು ಜೂ.2 ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ:

2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಾಲಹಳ್ಳಿಯ ಅಪಾರ್ಟ್​ಮೆಂಟ್​ವೊಂದರಲ್ಲಿ 9 ಸಾವಿರಕ್ಕೂ‌ ಅಧಿಕ ವೋಟರ್ ಐಡಿ ಕಾರ್ಡ್ ಗಳು ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಮತ್ತು ಸ್ಥಳೀಯ ನಿವಾಸಿ ರಾಕೇಶ್ ಎಂಬುವರು ಮುನಿರತ್ನ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಆದರೆ ಜಾಲಹಳ್ಳಿ ಠಾಣೆ ಪೊಲೀಸರು ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ಮಾಡಿಲ್ಲವೆಂದು ಆರೋಪಿಸಿರುವ ಅರ್ಜಿದಾರರು ಕಳೆದ ಫೆಬ್ರವರಿ 10 ರಂದು ಹೈಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಿದ್ದರು.

ABOUT THE AUTHOR

...view details