ಕರ್ನಾಟಕ

karnataka

ETV Bharat / state

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಹೈಕೋರ್ಟ್ ಆಕ್ರೋಶ - Highcourt latest news

ಘನತ್ಯಾಜ್ಯ ನಿರ್ವಹಣೆ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Highcourt
Highcourt

By

Published : Oct 23, 2020, 9:22 PM IST

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಮಂಡಳಿಯ ಕಾರ್ಯ ವೈಖರಿಯ ಬಗ್ಗೆಯೇ ತನಿಖೆ ನಡೆಸುವ ಅಗತ್ಯವಿದೆ ಎಂದು ಕಟುವಾಗಿ ಟೀಕಿಸಿದೆ.

ಘನತ್ಯಾಜ್ಯ ನಿರ್ವಹಣೆ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ, ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು ಅನುಪಾಲನಾ ವರದಿ ಸಲ್ಲಿಸಿದರು. ಅದರಲ್ಲಿ ಈವರೆಗೆ ಪರಿಸರ ಸಂರಕ್ಷಣೆ ಕಾಯ್ದೆಯಡಿ ಕೇವಲ 58 ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿದ ಪೀಠ, ಮಂಡಳಿ ರಚನೆಯಾಗಿ 35 ವರ್ಷ ಕಳೆದಿದೆ. ಮಂಡಳಿ ಇತಿಹಾಸದಲ್ಲೇ ಪರಿಸರ ಸಂರಕ್ಷಣೆ ಕಾಯ್ದೆ ಅಡಿ ಕೇವಲ 58 ಪ್ರಕರಣಗಳು ದಾಖಲಾಗಿವೆ ಎಂಬುದನ್ನು ನಂಬಲಾಗುತ್ತಿಲ್ಲ.

ಬಹುಶಃ ಮಂಡಳಿ ಪರವಾನಗಿ ನೀಡುವುದಕ್ಕಷ್ಟೇ ಸೀಮಿತವಾಗಿದೆ. ನಿಯಮಗಳ ಉಲ್ಲಂಘನೆ ವಿಚಾರ ಬಂದಾಗ ಮೌನವಾಗುತ್ತಿದೆ. ಕೋರ್ಟ್ ಹೇಳಿದರಷ್ಟೇ ಮಂಡಳಿಗೆ ಎಚ್ಚರವಾಗುತ್ತದೆ. ಹೀಗಾಗಿ ಮಂಡಳಿಯ ಕಾರ್ಯ ವೈಖರಿಯ ಬಗ್ಗೆಯೇ ತನಿಖೆ ನಡೆಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಮಂಡಳಿ ದಾಖಲಿಸಿರುವ 595 ಪ್ರಕರಣಗಳು :
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈವರೆಗೆ ಒಟ್ಟು 595 ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಇವುಗಳ ಪೈಕಿ ಜಲ ಕಾಯ್ದೆ ಅಡಿ 326, ವಾಯು ಕಾಯ್ದೆಯಡಿ 211, ಪರಿಸರ ಸಂರಕ್ಷಣೆ ಕಾಯ್ದೆಯಡಿ 58 ಪ್ರಕರಣಗಳನ್ನಷ್ಟೇ ದಾಖಲಿಸಲಾಗಿದೆ. 595 ಪ್ರಕರಣಗಳಲ್ಲಿ 34 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. ವಿಚಾರಣೆ ಹಂತದಲ್ಲಿ 338 ಪ್ರಕರಣಗಳು ಬಾಕಿ ಇವೆ.

ABOUT THE AUTHOR

...view details