ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹಾಕಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಎರಡು ದಿನ ಮುಂದೂಡಿದೆ.
ಡಿನೋಟಿಫಿಕೇಷನ್ ಪ್ರಕರಣ : ಮಾಜಿ ಸಿಎಂ ಹೆಚ್ಡಿಕೆ ಅರ್ಜಿ ವಿಚಾರಣೆ ಮುಂದೂಡಿಕೆ - ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್ಡಿಕೆಗೆ ಸಮನ್ಸ್
ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ ವಕೀಲರು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ 2 ದಿನಗಳ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ.
ಅರ್ಜಿ ಕುರಿತಂತೆ ವಾದ ಮಂಡಿಸಲು ಕುಮಾರಸ್ವಾಮಿ ಪರ ವಕೀಲರು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠದ ಮುಂದೆ 2 ದಿನ ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಗಿದೆ. ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ಕೋರ್ಟ್ ಮುಂದೆ ಖುದ್ದು ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್ಡಿಕೆಗೆ ಸಮನ್ಸ್ ನೀಡಿತ್ತು.
ಪ್ರಕರಣದ ವಿವರ :2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಜುಲೈ 20 ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ-ರಿಪೋರ್ಟ್ ವಜಾಗೊಳಿಸಿ, ವಿಚಾರಣೆಗೆ ಆದೇಶಿಸಿತ್ತು. 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತರ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತ ಪ್ರಕರಣ ದಾಖಲಿಸಿ, 2018 ರಲ್ಲಿ ಬಿ-ರಿಪೋರ್ಟ್ ಸಲ್ಲಿಸಿತ್ತು.