ಕರ್ನಾಟಕ

karnataka

ETV Bharat / state

ಜಾತಿವಾರು ನಿಗಮ ಸ್ಥಾಪನೆ ಪ್ರಶ್ನಿಸಿ ಪಿಐಎಲ್ : ಜೂ.7ಕ್ಕೆ ವಿಚಾರಣೆ

ಜಾತಿ ಆಧಾರಿತ ನಿಗಮ - ಮಂಡಳಿಗಳನ್ನು ರಚಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂ.7ಕ್ಕೆ ಮುಂದೂಡಿದೆ.

highcourt
highcourt

By

Published : May 24, 2021, 10:23 PM IST

ಬೆಂಗಳೂರು : ಜಾತಿ ಆಧಾರಿತ ನಿಗಮ -ಮಂಡಳಿಗಳನ್ನು ರಚಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂ.7ಕ್ಕೆ ಮುಂದೂಡಿದೆ.

ವೀರಶೈವ - ಲಿಂಗಾಯತ ಅಭಿವೃದ್ಧಿ ಮಂಡಳಿ, ಮರಾಠ ಅಭಿವೃದ್ಧಿ ನಿಗಮ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಸೇರಿದಂತೆ ಜಾತಿ ಆಧಾರಿತ ನಿಗಮ ಮಂಡಳಿಗಳನ್ನು ರಚಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಎಸ್. ಬಸವರಾಜ್ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿಗಳ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ವಾದ ಆಲಿಸಿದ ಪೀಠ, ಎರಡೂ ಕಡೆಯ ವಕೀಲರ ಒಪ್ಪಿಗೆಯಂತೆ ಅರ್ಜಿಗಳ ಅಂತಿಮ ವಿಚಾರಣೆಗೆ ಜೂ.7ರಂದು ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ABOUT THE AUTHOR

...view details