ಕರ್ನಾಟಕ

karnataka

ETV Bharat / state

ಹಿಜಾಬ್: ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೂರ್ಣಪೀಠದಲ್ಲಿ 4ನೇ ದಿನದ ವಿಚಾರಣೆ ಆರಂಭ - ಕರ್ನಾಟಕದಲ್ಲಿ ಹಿಜಾಬ್​ ವಿಚಾರದ ಚರ್ಚೆ

ಪ್ರಕರಣದಲ್ಲಿ ನಾಲ್ಕನೇ ದಿನವೂ ಅರ್ಜಿದಾರರ ಪರ ವಕೀಲರೇ ವಾದ ಮಂಡಿಸುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸುತ್ತಿದ್ದು, ಶಿಕ್ಷಣ ಕಾಯ್ದೆಯ ಪ್ರಕಾರ ಒಮ್ಮೆ ನಿಗದಿಪಡಿಸಿದ ಸಮವಸ್ತ್ರವನ್ನು 5 ವರ್ಷ ಬದಲಿಸಬಾರದು ಎಂದು ವಾದಿಸುತ್ತಿದ್ದಾರೆ.

ಹಿಜಾಬ್: ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೂರ್ಣಪೀಠದಲ್ಲಿ 4ನೇ ದಿನದ ವಿಚಾರಣೆ ಆರಂಭ
ಹಿಜಾಬ್: ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೂರ್ಣಪೀಠದಲ್ಲಿ 4ನೇ ದಿನದ ವಿಚಾರಣೆ ಆರಂಭ

By

Published : Feb 16, 2022, 3:33 PM IST

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

ಪ್ರಕರಣದಲ್ಲಿ ನಾಲ್ಕನೇ ದಿನವೂ ಅರ್ಜಿದಾರರ ಪರ ವಕೀಲರೇ ವಾದ ಮಂಡಿಸುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸುತ್ತಿದ್ದು, ಶಿಕ್ಷಣ ಕಾಯ್ದೆಯ ಪ್ರಕಾರ ಒಮ್ಮೆ ನಿಗದಿಪಡಿಸಿದ ಸಮವಸ್ತ್ರವನ್ನು 5 ವರ್ಷ ಬದಲಿಸಬಾರದು. ಬದಲಿಸುವ ಮುನ್ನ 1 ವರ್ಷಕ್ಕೆ ಮುನ್ನ ನೋಟಿಸ್ ನೀಡಬೇಕು, ಪೋಷಕರಿಗೆ ನೋಟಿಸ್ ನೀಡಬೇಕೆಂಬ ನಿಯಮವಿದೆ. ಅದೇ ರೀತಿ ಹಿಜಾಬ್ ವಿಚಾರದಲ್ಲೂ 1 ವರ್ಷ ಮೊದಲೇ ನೋಟಿಸ್ ನೀಡಬೇಕಿತ್ತು ಎಂದು ವಾದಿಸುತ್ತಿದ್ದಾರೆ.

ಅರ್ಜಿಗಳಿಗಿಂತ ಮಧ್ಯಂತರ ಅರ್ಜಿಗಳೇ ಹೆಚ್ಚು:ಇದಕ್ಕೂ ಮುನ್ನ ವಿಚಾರಣೆ ಆರಂಭದಲ್ಲಿ ಅರ್ಜಿಗಳಿಗೆ ಸಂಬಂಧಿಸಿದಂತೆ 18ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿರುವುದನ್ನು ಗಮನಿಸಿದ ಪೀಠ, ಹೀಗೆ ನಿರಂತರವಾಗಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸುತ್ತಿದ್ದರೆ, ಪ್ರಕರಣ ಇತ್ಯರ್ಥಗೊಳಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಹಾಗೆಯೇ, ಒಂದು ಅರ್ಜಿಗೆ ಒಬ್ಬರೇ ವಾದಿಸಬೇಕು. ಒಂದೇ ವಾದವನ್ನು ಪುನರಾವರ್ತನೆ ಮಾಡಬಾರದು. ಎಲ್ಲ ಮಧ್ಯಂತರ ಅರ್ಜಿ ವಿಚಾರಣೆ ಅಗತ್ಯವಿಲ್ಲ. ಈ ಅರ್ಜಿಗಳಿಂದ ಕೋರ್ಟ್ ಸಮಯ ವ್ಯರ್ಥವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿತು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ಹಿರಿಯ ವಕೀಲರು, ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಎಲ್ಲರ ವಾದವನ್ನೂ ಆಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ:ಸಚಿವ ಕೆ ಎಸ್​ ಈಶ್ವರಪ್ಪ ಹೇಳಿಕೆಗೆ ತೀವ್ರ ವಿರೋಧ : 3 ಗಂಟೆಗೆ ಸದನ ಮುಂದೂಡಿದ ಸ್ಪೀಕರ್​

ABOUT THE AUTHOR

...view details