ಕರ್ನಾಟಕ

karnataka

ETV Bharat / state

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು : ಸಿಎಂ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಚ್ಚ ನ್ಯಾಯಾಲಯದ ತ್ರಿ ಸದಸ್ಯ ಪೀಠ ನೀಡಿರುವ ತೀರ್ಪನ್ನು ನಾವೆಲ್ಲರೂ ಪಾಲಿಸಬೇಕು. ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡಬೇಕು. ಶಾಂತಿಯನ್ನು ಕಾಪಾಡಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Everybody must obey a court order Basavaraj Bommai
ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು: ಸಿಎಂ

By

Published : Mar 15, 2022, 5:19 PM IST

ಬೆಂಗಳೂರು :ಹೈಕೋರ್ಟ್ ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು : ಸಿಎಂ

ಹಿಜಾಬ್ ತೀರ್ಪು ಸಂಬಂಧ ಪ್ರತಿಕ್ರಿಯಿಸಿದ ಅವರು, ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದದ್ದು ಬೇರೊಂದಿಲ್ಲ. ಹೀಗಾಗಿ, ಉನ್ನತ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿರುವ ತೀರ್ಪನ್ನು ನಾವೆಲ್ಲರೂ ಪಾಲಿಸಬೇಕು ಎಂದರು.

ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡಬೇಕು. ಶಾಂತಿಯನ್ನು ಕಾಪಾಡಬೇಕು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಬಹಳ ಮುಖ್ಯ. ಜನತೆ, ಎಲ್ಲ ಸಮುದಾಯದ ನಾಯಕರು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಯನ್ನು ಕಾಪಾಡಿ, ತೀರ್ಪಿನ ಅನ್ವಯ ಶಿಕ್ಷಣ ನೀಡಲು ಸಹಕರಿಸಬೇಕೆಂದು ಕಳಕಳಿಯ ವಿನಂತಿ ಮಾಡಿದರು.

ಪರೀಕ್ಷೆಗಳಿಂದ ಹೊರಗುಳಿಯಬೇಡಿ :ಕಾನೂನು ಸುವ್ಯವಸ್ಥೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಉನ್ನತ ನ್ಯಾಯಾಲಯದ ತೀರ್ಪಿನಿಂದ ಪ್ರಕರಣ ಇತ್ಯರ್ಥವಾಗಿರುವುದರಿಂದ ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ವ್ಯತಿರಿಕ್ತವಾಗಿ ಕಾನೂನನ್ನು ಕೈಗೆ ತೆಗೆದುಕೊಂಡರೆ ನಮ್ಮ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಲಿದೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ಹೈಕೋರ್ಟ್ ತೀರ್ಪನ್ನು ಮರು ಪ್ರಶ್ನೆ ಮಾಡುತ್ತೇವೆ: ಹಿಜಾಬ್ ಪರ ವಿದ್ಯಾರ್ಥಿನಿಯರ ಮಾತು

ABOUT THE AUTHOR

...view details