ಶಿವಮೊಗ್ಗ: ಹಿಜಾಬ್ಗೆ ಅವಕಾಶ ನೀಡುವಂತೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ: ಹಿಜಾಬ್ಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ಶಿವಮೊಗ್ಗದಲ್ಲಿ ಹಿಜಾಬ್ - ಕೇಸರಿ ಶಾಲಿನ ವಿವಾದ
ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನ ವಿದ್ಯಾರ್ಥಿನಿಗೆ ಹಿಜಾಬ್ ತೆಗೆದು ತರಗತಿಗೆ ಹಾಜರಾಗಲು ಕಾಲೇಜಿನ ಆಡಳಿತ ಮಂಡಳಿ ಸೂಚಿಸಿದೆ. ಈ ವೇಳೆ ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿ ಗೇಟ್ ಮುಂದೆ ತನ್ನ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ
ಶಿವಮೊಗ್ಗ
ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳನ್ನು ಶಿಕಾರಿಪುರ ತಹಶೀಲ್ದಾರ್ ಕವಿರಾಜ್ ಅವರು ಮನವೊಲಿಸುವ ಯತ್ನ ಮಾಡಿದರು. ಆದರೂ, ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದರಿಂದ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಿನ್ನೆ ಕೂಡ ಶಿರಾಳಕೊಪ್ಪದ ಆರ್ ಎಂ ಎಸ್ ಶಾಲೆ ಮತ್ತು ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ ಪ್ರತಿಭಟನೆ ನಡೆದಿತ್ತು.
ಓದಿ:ತರಗತಿ ಬೇಡ, ಕ್ಯಾಂಪಸ್‌ನೊಳಗೆ ಬಿಡುವಂತೆ ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿಗಳ ಪಟ್ಟು