2023 ನೇ ಸಾಲಿನ ಹಜ್ ವಿಮಾನ ಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿನ್ನೆ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟ ನಿಯೋಗದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, "ಹಿಂದಿನ ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್ ಆಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನದ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ.
ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೇ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು" ಎಂದರು.
2023 ನೇ ಸಾಲಿನ ಹಜ್ ವಿಮಾನ ಯಾತ್ರೆ ಉದ್ಘಾಟನೆ ಕಾರ್ಯಕ್ರಮ ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ. ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜಾತಿವಾರು ಸಮೀಕ್ಷೆ ವರದಿ ಸ್ವೀಕಾರ : ಐತಿಹಾಸಿಕ ಕಾರಣಗಳಿಂದಾಗಿ ಶತ ಶತಮಾನಗಳಿಂದ ಅವಕಾಶ ವಂಚಿತರಿಗೆ ಸೌಲಭ್ಯ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ ಜನರಿಗೆ ಶಿಕ್ಷಣ, ಉದ್ಯೋಗ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ತಿಳಿಸಿದರು.
ಸಿಎಂ ಭೇಟಿಯಾದ ನೆದರ್‌ಲ್ಯಾಂಡ್‌ನ ಕಾನ್ಸುಲೇಟ್ ಜನರಲ್ ಎವೊಟ್ ಡಿ ವಿಟ್ ಇದನ್ನೂ ಓದಿ :ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದ ಶ್ರೀಗಳಿಂದ ಸಿದ್ದರಾಮಯ್ಯ ಭೇಟಿ, ಚರ್ಚೆ
ಸರ್ಕಾರ ಎಲ್ಲ ವರ್ಗಗಳ ಬಡವರ ಪರ : ನಮ್ಮ ಸರ್ಕಾರ ಎಲ್ಲ ವರ್ಗದವರ ಪರವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ ಎಂದರು.
ಸಿಎಂ ಭೇಟಿಯಾದ ಸಿಐಐ ಕರ್ನಾಟಕದ ಅಧ್ಯಕ್ಷ ವಿಜಯ್ ಕೃಷ್ಣನ್ ವೆಂಕಟೇಶನ್ ನೇತೃತ್ವದ ನಿಯೋಗ ಡಚ್ ಕೈಗಾರಿಕೋದ್ಯಮಗಳ ಹೂಡಿಕೆಗೆ ಉತ್ತೇಜನ : ಬೆಂಗಳೂರಿನಲ್ಲಿ ನೆದರ್‌ಲ್ಯಾಂಡ್‌ನ ಕಾನ್ಸುಲೇಟ್ ಜನರಲ್ ಎವೊಟ್ ಡಿ ವಿಟ್ (Ewout de Wit) ಅವರು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ನೆದರ್‌ಲ್ಯಾಂಡ್ ದೇಶವು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಒಟ್ಟಾರೆ ಹೂಡಿಕೆಯ ಶೇ. 9 ರಷ್ಟಿದೆ. ಸುಸ್ಥಿರ ಇಂಧನ, ಇಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮೊದಲಾದ ಉದ್ಯಮಗಳಲ್ಲಿ ವಿಶೇಷವಾಗಿ ನಾವಿನ್ಯತಾ ವಲಯದಲ್ಲಿ ನೆದರ್‌ಲ್ಯಾಂಡ್ ವಿಶೇಷ ಆಸಕ್ತಿ ಹೊಂದಿದೆ ಎಂದು ವಿವರಿಸಿದರು. ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
2023 ನೇ ಸಾಲಿನ ಹಜ್ ವಿಮಾನ ಯಾತ್ರೆ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ನಲ್ಲಿ ನೆದರ್ಲ್ಯಾಂಡಿನ ಪ್ರಧಾನಿ ಭಾರತಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿಗೂ ಆಗಮಿಸಲಿದ್ದಾರೆ. ಈ ವೇಳೆ ವಾಣಿಜ್ಯೋದ್ಯಮಿಗಳ ನಿಯೋಗವು ರಾಜ್ಯದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆಯ ಕುರಿತು ಚರ್ಚಿಸಲು ಉತ್ಸುಕವಾಗಿದೆ.
ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ :ರಾಜ್ಯದಲ್ಲಿ ಕೈಗಾರಿಕಾ ವಲಯವು ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮನ್ನು ಭೇಟಿಯಾದ ಸಿಐಐ ಕರ್ನಾಟಕದ ಅಧ್ಯಕ್ಷ ವಿಜಯ್ ಕೃಷ್ಣನ್ ವೆಂಕಟೇಶನ್ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಿದರು.
ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲಾಗಿತ್ತು. ಈ ಅವಧಿಯಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದಲ್ಲದೇ, ಕೈಗಾರಿಕಾ ಸಂಸ್ಥೆಗಳು ಮತ್ತು ಸರ್ಕಾರದ ನಡುವೆ ಪರಸ್ಪರ ಸಹಕಾರ, ಎಂಎಸ್ ಎಂಇ ಗಳಿಗೆ ಉತ್ತೇಜನ, ಸಾಮರ್ಥ್ಯ ಅಭಿವೃದ್ಧಿಗೆ ನೆರವು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳಾದ ವೋಲ್ವೋ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ, ಅಮನ್ ಚೌಧುರಿ, ರಾಧಿಕಾ ಧಾಲ್ ಹಾಗೂ ನಾರಾಯಣ ರಾವ್ ಉಪಸ್ಥಿತರಿದ್ದರು.
ಇದನ್ನೂ ಓದಿ :ವೀಕೆಂಡ್ ವಿತ್ ರಮೇಶ್: ಸಾಧಕರ ಕುರ್ಚಿ ಏರಿದ ಡಿಸಿಎಂ ಡಿಕೆಶಿ: ಸಿಎಂ ಸಿದ್ದರಾಮಯ್ಯ ಹೀಗಂದ್ರು!
ಸರ್ವರಿಗೂ ಸಮಪಾಲು : ನಮ್ಮ ಸರ್ಕಾರ "ಸರ್ವರಿಗೂ ಸಮಪಾಲು" ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ 2023 ನೇ ಸಾಲಿನ ಹಜ್ ವಿಮಾನ ಯಾತ್ರೆ ಉದ್ಘಾಟನೆ ಕಾರ್ಯಕ್ರಮದ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯವಾಗುತ್ತದೆ.
ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ. ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು, ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ನಿವೇದಿಸಿಕೊಂಡರು.