ಬೆಂಗಳೂರು: 'ಹಿಂದಿ ದಿವಸ್' ಆಚರಣೆಯಂತೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ... ಮೋದಿಗೆ ಹೆಚ್ಡಿಕೆ ಪ್ರಶ್ನೆ - ಕನ್ನಡ ದಿನ
ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆಯಾಗಿರುವ ಕನ್ನಡ ಭಾಷಾ ದಿನವನ್ನು ಯಾವಾಗ ಆಚರಿಸುತ್ತೀರಿ? ಕನ್ನಡಿಗರೂ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮೋದಿಗೆ ಹೆಚ್ಡಿಕೆ ಪ್ರಶ್ನೆ
ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ ಎಂದು ಟಾಂಗ್ ನೀಡಿದ್ದಾರೆ.