ಬೆಂಗಳೂರು :ವಿಜಯನಗರ ಜಿಲ್ಲೆಯಾಗಬೇಕೆಂಬುದು ಬಹುದಿನದ ಬೇಡಿಕೆಯಾಗಿತ್ತು. ಈ ಕ್ಷೇತ್ರವನ್ನು ಜಿಲ್ಲೆಯಾಗಿ ಮಾಡಿರುವುದು ಐತಿಹಾಸಿಕ ತೀರ್ಮಾನ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಸಂತಸ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯಾಗಿ ಮಾಡಿರುವುದು ಐತಿಹಾಸಿಕ ತೀರ್ಮಾನ: ಸಚಿವ ಆನಂದ್ ಸಿಂಗ್ - ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿಕೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಗ ಈಡೇರಿದೆ..
ಸಚಿವ ಆನಂದ್ ಸಿಂಗ್
ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ತೀರ್ಮಾನದಿಂದ ಸರ್ಕಾರ ಐತಿಹಾಸಿಕ ನಿರ್ಧಾರ ಮಾಡಿದೆ.
ಹಾಗಾಗಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಗ ಈಡೇರಿದೆ ಎಂದರು.
Last Updated : Nov 18, 2020, 5:48 PM IST