ಬೆಂಗಳೂರು:ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.
ರೇಷ್ಮೆ ಇಲಾಖೆ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ವೇಳೆ, ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ತಿಳಿಸಿದರು. ಬೈವೋಲ್ಟೀನ್ ರೇಷ್ಮೆ ಗೂಡಿಗೆ ಪ್ರತಿ ಟನ್ಗೆ 10 ಸಾವಿರ ರೂ. ಪ್ರೋತ್ಸಾಹಧನ ಬಿಡುಗಡೆಗೆ ಮಂಜೂರಾತಿ ನೀಡಲಾಗಿದೆ. ಶೀಘ್ರವೇ ಡಿ.ಬಿ.ಟಿ. ಮೂಲಕ ಬಿಡುಗಡೆ ಮಾಡಲಾಗುವುದು ಎಂದರು.