ಕರ್ನಾಟಕ

karnataka

ETV Bharat / state

ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ 12 ಅಂಶಗಳ ಪತ್ರ ಬರೆದ ಹೆಚ್​​​​.ಕೆ.ಪಾಟೀಲ್​​

ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಇನ್ನಷ್ಟು ಕಠಿಣ ನಿಯಮ ಜಾರಿಮಾಡುವಂತೆ ಕೋರಿ ಕಾಂಗ್ರೆಸ್ ಹಿರಿಯ ನಾಯಕ ಹೆಚ್​​​.ಕೆ.ಪಾಟೀಲ್​ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಿಳಿಸಲಾಗಿರುವ 12 ಅಂಶಗಳನ್ನು ತಕ್ಷಣವೇ ಅನುಷ್ಠಾನ ಮಾಡಿದರೆ ಕೊರೊನಾ ತಡೆಗಟ್ಟಬಹುದು ಅಂತ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ 12 ಅಂಶಗಳ ಪತ್ರ ಬರೆದ ಹೆಚ್​​​​.ಕೆ.ಪಾಟೀಲ್​​

By

Published : Apr 1, 2020, 4:23 PM IST

ಬೆಂಗಳೂರು:ಕೊರೊನಾ ವಿರುದ್ಧ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕೊರೊನಾ ವಿರುದ್ಧ ಹೋರಾಡಲು ಕಾಂಗ್ರೆಸ್ ಹಿರಿಯ ಮುಖಂಡ ಎಚ್​.ಕೆ.ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.‌‌

ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ 12 ಅಂಶಗಳ ಪತ್ರ ಬರೆದ ಹೆಚ್​​​​.ಕೆ.ಪಾಟೀಲ್​​

ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್​​​ನಿಂದ ಜನರನ್ನು ರಕ್ಷಿಸಲು ಇಡೀ ವಿಶ್ವ ಆತಂಕಕ್ಕೀಡಾಗಿ ಗಂಭೀರವಾದ ಪರಿಸ್ಥಿತಿ ಎದುರಿಸುತ್ತಾ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಾ, ಹೊಸ ಹೊಸ ಅನುಭವಗಳನ್ನು ಪಡೆಯುತ್ತಿದೆ. ಸರ್ಕಾರಗಳು ಮಾಡುತ್ತಿರುವ ಪ್ರಯತ್ನಗಳು ಸಾಲದು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಇಂದಿನ ಪರಿಸ್ಥಿತಿ ದಿನೇ ದಿನೆ ಬದಲಾಗುತ್ತಿರುವುದರಿಂದ ಮಹಾಮಾರಿಯ ಹರಡುವಿಕೆ ವ್ಯಾಪಕಗೊಳ್ಳುತ್ತಿರುವುದರಿಂದ ಈ ಕೆಳಕಂಡ ಸಲಹೆಗಳನ್ನು ನೀಡಲು ಬಯಸುತ್ತೇನೆ ಅಂತ ಪತ್ರದಲ್ಲಿ ತಿಳಿಸಿದ್ದು. ಸರ್ಕಾರಕ್ಕೆ ಪತ್ರದ ಮೂಲಕ 12 ಸಲಹೆಗಳನ್ನು ನೀಡಿದ್ದಾರೆ.

ಅಲ್ಲದೇ ಈ ಅಂಶಗಳು ಕೊರೊನಾ ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಎಲ್ಲಾ ಕ್ರಮಗಳನ್ನು ತಕ್ಷಣವೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸುತ್ತೇನೆ ಅಂತ ಪಾಟೀಲ್​ ಪತ್ರದಲ್ಲಿ ಉಲ್ಲೇಖಿಸಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ABOUT THE AUTHOR

...view details