ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಸಂಜೆ ಹಮ್ಮಿಕೊಂಡಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿರುವ ಹಿನ್ನೆಲೆ ವಿಧಾನಸೌಧದ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಪತಿ ಕಾರ್ಯಕ್ರಮ.. ಕಚೇರಿಗಳಿಗೆ ಇಂದು ರಜೆ ಘೋಷಣೆ - ರಾಷ್ಟ್ರಪತಿ ದ್ರೌಪದಿ ಮುರ್ಮು
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಪತಿ ಕಾರ್ಯಕ್ರಮ ಹಿನ್ನೆಲೆ ವಿಧಾನಸೌಧದ ಕಚೇರಿಗಳಿಗೆ ಇಂದು ರಜೆ ಘೋಷಿಸಲಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಪತಿ ಕಾರ್ಯಕ್ರಮ
ರಾಷ್ಟ್ರಪತಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್ಥಿಕ ಇಲಾಖೆ, ಒಳಾಡಳಿತ ಇಲಾಖೆ, ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಓದಿ:ರಾಷ್ಟ್ರಪತಿಗೆ ದೇವದಾಸಿಯರು ಹೊಲಿದ ಕೌದಿ, ಇಳಕಲ್ ಸೀರೆ ಕೊಟ್ಟ ಸುಧಾಮೂರ್ತಿ..!