ಕರ್ನಾಟಕ

karnataka

ETV Bharat / state

ಪೊಲೀಸರಿಗೆ ಕೆಲಸ ಕೊಡದಂತೆ ವರ್ತಿಸಿ..ರಾಜ್ಯದ ಜನರಲ್ಲಿ ಮನವಿ ಮಾಡಿದ ಗೃಹ ಸಚಿವ - ಆರಗ ಜ್ಞಾನೇಂದ್ರ

ಕೋರಮಂಗಲದಲ್ಲಿರುವ ಕೆಎಸ್​ಆರ್​​ಪಿ ಕ್ರೀಡಾಕೂಟ ಉದ್ಘಾಟಿಸಿದ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಹಿಜಾಬ್ ಸಂಬಂಧ ಹೈಕೋರ್ಟ್​ನಲ್ಲಿ ನಡೆಯುತ್ತಿದ್ದ ವಿಚಾರಣೆ ಮುಂದಕ್ಕೆ ಹೋಗಿದೆ. ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೇಳಿದೆ.

home-minister-aaraga-jnanendra
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು

By

Published : Feb 10, 2022, 7:12 PM IST

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದ ಹಿಜಾಬ್ - ಕೇಸರಿ ವಿವಾದ ಸಂಬಂಧ ಇಂದು ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು

ಕೋರಮಂಗಲದಲ್ಲಿರುವ ಕೆಎಸ್​ಆರ್​ಪಿ ಕ್ರೀಡಾಕೂಟ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಹಿಜಾಬ್ ಸಂಬಂಧ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದ ವಿಚಾರಣೆ ಮುಂದಕ್ಕೆ ಹೋಗಿದೆ. ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೇಳಿದೆ.

ಅಂದರೆ, ಸರ್ಕಾರದ ಆದೇಶವನ್ನು ಮುಂದುವರೆಸಿದೆ. ನಾಳೆಯಿಂದ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರೆಯಬಹುದು. ಪೊಲೀಸರಿಗೆ ಕೆಲಸ ಕೊಡದಂತೆ ಶಾಂತಿಯುತವಾಗಿ ಇರಬೇಕು. ನಾಳೆಯಿಂದ ಶಾಲಾ - ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ. ಹಂತ ಹಂತವಾಗಿ ಶಾಲೆಗಳನ್ನು ತೆರೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆ. ಅದರ ಗಮನ ಕೊಡಬೇಕಿದೆ. ಸಂಜೆ ಸಿಎಂ ಜೊತೆ ಸಭೆಯಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧರಿಸುತ್ತೇವೆ ಎಂದರು.

ಓದಿ:ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ನಾಗೇಶ್​

ABOUT THE AUTHOR

...view details