ಕರ್ನಾಟಕ

karnataka

ETV Bharat / state

ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‌ಗೆ ಫೀಲ್ಡ್ ಗಿಳಿತಾರಾ ಅಮಿತ್ ಶಾ? - ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ವಿಚಾರ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಆದ್ರೆ ತಮ್ಮದೇ ಪ್ರವೀಣ್​ ನೆಟ್ಟಾರು ಕೊಲೆ ವಿಷಯದಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ. ಈ ಡ್ಯಾಮೇಜ್​ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ದೊರೆಯುತ್ತಿದೆ.

Home minister Amit shah tour of Karnataka, Amit shah Karnataka tour over BJP workers resign issue, BJP workers resign issue in Karnataka, Praveen Nettaru murder case, ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ, ಬಿಜೆಪಿ ಕಾರ್ಯಕರ್ತರ ರಾಜೀನಾಮೆ ವಿಚಾರವಾಗಿ ಅಮಿತ್ ಶಾ ಕರ್ನಾಟಕ ಪ್ರವಾಸ, ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ವಿಚಾರ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ,
ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ

By

Published : Aug 2, 2022, 7:28 AM IST

ಬೆಂಗಳೂರು: ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಯಿಂದ ಕಾರ್ಯಕರ್ತರಲ್ಲಿ ಆಕ್ರೋಶದ ಕಟ್ಟೆ ಹೊಡೆದಿದೆ. ಡ್ಯಾಮೇಜ್ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಇದೇ ಮೊದಲ ಬಾರಿ ಬಿಜೆಪಿ ಕಾರ್ಯಕರ್ತರು ತನ್ನದೇ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಮುತ್ತಿಗೆ, ಗೃಹ ಸಚಿವರ ಮುತ್ತಿಗೆಯಂತಹ ಚಟುವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಅವರ ಕಾರ್ತಕರ್ತರೇ ದೊಡ್ಡ ಮಟ್ಟದಲ್ಲಿ ಆಕ್ರೋಶಗೊಂಡಿದ್ದಾರೆ. ಸರ್ಕಾರ ನೀಡುತ್ತಿರುವ ಉತ್ತರದಿಂದ ಅವರೆಲ್ಲಾ ಸಮಾಧಾನಿತರಾಗುತ್ತಿಲ್ಲ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಹರಿದಾಡುತ್ತಿದ್ದು, ಕಾರ್ಯಕರ್ತರಲ್ಲಿ ಹೊಸ ಭರವಸೆಯ ಆಶಾಕಿರಣ ಮೂಡಿದೆ.

ಆಗಸ್ಟ್ 4 ರಂದು ರಾಜ್ಯಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ರಾಜ್ಯ ಘಟಕದ ಬಳಿ ಯಾವುದೇ ಮಾಹಿತಿ ಇಲ್ಲ. ಕೇಂದ್ರ ಗೃಹ ಸಚಿವರ ಯಾವುದೇ ಕಾರ್ಯಕ್ರಮ ಸದ್ಯಕ್ಕೆ ಇಲ್ಲ. ಅವರು ಆಗಮಿಸುವ ಮಾಹಿತಿಯೂ ಇಲ್ಲ ಎಂದು ರಾಜ್ಯ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವರ ಭೇಟಿಗೂ ಮುನ್ನ ಪ್ರೋಟೋಕಾಲ್ ಪ್ರಕಾರ ಕೆಲವೊಂದು ಪರಿಶೀಲನೆ ಕೇಂದ್ರದಿಂದ ನಡೆಸಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಗೆ ಅಮಿತ್ ಶಾ ಆಗಮನ ಸಾಧ್ಯತೆ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಸದ್ಯ ಅಮಿತ್ ಶಾ ಪ್ರವಾಸ ಪಟ್ಟಿ ಇನ್ನು ಅಂತಿಮಗೊಂಡಿಲ್ಲ. ಇನ್ನೊಂದು ದಿನದಲ್ಲಿ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ಹತ್ಯೆಯ ತನಿಖೆ ಆರಂಭಿಸಿದ ಎನ್ಐಎ ತನಿಖಾ ತಂಡ..!

ABOUT THE AUTHOR

...view details