ಕರ್ನಾಟಕ

karnataka

ETV Bharat / state

ಮೈಸೂರು ಪ್ರಕರಣದಲ್ಲಿ ಪೊಲೀಸರ ಆಪರೇಷನ್ ಸಕ್ಸಸ್: ಗೃಹ ಸಚಿವ ಆರಗ ಜ್ಞಾನೇಂದ್ರ - ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಮೈಸೂರಿನ ಸಾಮೂಹಿಕ ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಚಿತ ಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ಯಾರೋ ಹೇಳಿದ್ರು ಅಂತ ಹೇಳಕ್ಕಾಗಲ್ಲ. ಆಪರೇಷನ್ ಸಕ್ಸಸ್ ಆಗಿದೆ ಎಂದು ಸೂಚ್ಯವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Aug 28, 2021, 11:11 AM IST

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸರ ಆಪರೇಷನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸದ ಅವರು, ಆರೋಪಿಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ಯಾರೋ ಹೇಳಿದ್ರು ಅಂತ ಹೇಳಕ್ಕಾಗಲ್ಲ. ಆಪರೇಷನ್ ಸಕ್ಸಸ್ ಆಗಿದೆ ಎಂದು ಸೂಚ್ಯವಾಗಿ ತಿಳಿಸಿದರು. ಆರೋಪಿಗಳ ಬಂಧನ ಬಗ್ಗೆ ಇನ್ನೂ ವಿವರಗಳು ಬರಬೇಕಿದೆ. ಎರಡು ಗಂಟೆಯೊಳಗೆ ಸಂಪೂರ್ಣ ವಿವರ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಎಲ್ಲಾ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : Mysuru Gang Rape: ಹೊರ ರಾಜ್ಯದಲ್ಲಿ ಆರೋಪಿಗಳ ಬಂಧನ..?

ABOUT THE AUTHOR

...view details