ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಶನಿವಾರ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ ಆಡಿಯೋ ಕುರಿತಂತೆ ಗೃಹ ಸಚಿವರು ಪತ್ರಿಕಾ ಹೇಳಿಕೆ ನೀಡಿದ್ದು, ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಹುದ್ದೆಯಿಂದ ವಂಚಿತರಾಗಬಾರದರು. ಅಂತಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿದ್ದೆ ಎಂದರು.
ಮುಖ್ಯಮಂತ್ರಿಗಳ ಜೊತೆಗೂ ಸಮಾಲೋಚಿಸಿ ನಾನು ತನಿಖೆಗೆ ಆದೇಶ ನೀಡಿದ್ದೆ. ಆ ನಂತರ ಪ್ರಿಯಾಂಕ್ ಖರ್ಗೆ ಕೂಡ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ, ಆಗ ಆಡಿಯೋ ರೆಕಾರ್ಡ್ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು? ಎಂದು ಸಚಿವರು ಮರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಪಿಎಸ್ಐ ನೇಮಕಾತಿ ಅಕ್ರಮ : ಸ್ಫೋಟಕ ಆಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ