ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದ ಸೆಂಟರ್ ಫಾರ್ ಕೌಂಟರ್ ಟೆರರಿಸಂ ಕಮಾಂಡೋ ತರಬೇತಿ ಕೇಂದ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಮುಂಜಾನೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ಕೂಡ್ಲು ಬಳಿಯ ಚೂಡಸಂದ್ರದಲ್ಲಿರುವ ಸೆಂಟರ್ ಫಾರ್ ಕೌಂಟರ್ ಟೆರರಿಸಂಗೆ ಭೇಟಿ ನೀಡಿದ ಬಳಿಕ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಂತರ ಭಯೋತ್ಪಾದಕ ನಿಗ್ರಹ ದಳದ ಸಿಬ್ಬಂದಿಯ ಕಾರ್ಯ ವೈಖರಿಯ ಅಣಕು ಪ್ರದರ್ಶನ ವೀಕ್ಷಿಸಿದರು.